alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಲ್ಲಿಂದು ಕಾಂಗ್ರೆಸ್ ನ ಎರಡು ಬಣಗಳ ಪ್ರತ್ಯೇಕ ಸಭೆ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆಯಾದ ಬಳಿಕ, ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಬೆಂಗಳೂರಿನಲ್ಲಿ ಇಂದು ಶಾಸಕರ ಎರಡು ಬಣಗಳು ಪ್ರತ್ಯೇಕ ಸಭೆ ನಡೆಸುತ್ತಿರುವುದು ಕುತೂಹಲ ಮೂಡಿಸಿದೆ.

ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರುಗಳು ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಸಲಿದ್ದಾರೆಂದು ಹೇಳಲಾಗಿದ್ದು, ಈ ಸಭೆಯಲ್ಲಿ ಹೆಚ್. ಕೆ. ಪಾಟೀಲ್, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಹ್ಯಾರಿಸ್, ರೋಷನ್ ಬೇಗ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆನ್ನಲಾಗಿದೆ.

ಮತ್ತೊಂದೆಡೆ ತಾವು ಯಾವುದೇ ಬಣಕ್ಕೆ ಸೇರದವರು ಎಂದು ಹೇಳಿಕೊಳ್ಳುತ್ತಿರುವ ಶಾಸಕರುಗಳು ಪ್ರತ್ಯೇಕ ಸಭೆ ನಡೆಸಲು ಮುಂದಾಗಿದ್ದು, ಈ ಸಭೆಯಲ್ಲಿ ಭೈರತಿ ಸುರೇಶ್, ಆನೇಕಲ್ ಶಿವಣ್ಣ, ಮುನಿರತ್ನ, ಎಸ್.ಟಿ. ಸೋಮಶೇಖರ್, ಭೈರತಿ ಬಸವರಾಜ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದು, ಶಾಸಕರುಗಳು ಯಾವ ನಿರ್ಧಾರ ಕೈಗೊಳ್ಳಲಿದ್ದಾರೆಂಬುದನ್ನು ಕಾದುನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...