alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿಗೆ ಆಗಮಿಸುತ್ತಿರುವ ‘ಕೈ’ ಶಾಸಕರು

ಕುದುರೆ ವ್ಯಾಪಾರದ ಭಯದಿಂದ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಅನಿವಾರ್ಯತೆಯಲ್ಲಿರುವ ಕಾಂಗ್ರೆಸ್ ನಾಯಕರು ಕಳೆದ ರಾತ್ರಿಯೇ ಅವರುಗಳಿಗೆ ರಾಮನಗರ ತಾಲೂಕಿನ ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯ ಕಲ್ಪಿಸಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಬಹುಮತವಿರುವ ಕಾರಣ ತಮಗೆ ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲರು ಕರೆಯಬಹುದೆಂಬ ನಿರೀಕ್ಷೆಯಲ್ಲಿದ್ದ ಉಭಯ ಪಕ್ಷಗಳ ನಾಯಕರಿಗೆ ಆಘಾತವಾಗಿದ್ದು, ರಾಜ್ಯದ 23 ನೇ ಮುಖ್ಯಮಂತ್ರಿಯಾಗಿ ಬಿಜೆಪಿಯ ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಹೀಗಾಗಿ ರಾಜಭವನದ ಮುಂದೆ ಪ್ರತಿಭಟನೆ ನಡೆಸಲು ಈ ಪಕ್ಷಗಳ ನಾಯಕರು ಮುಂದಾಗಿದ್ದು, ಈಗಲ್ಟನ್ ರೆಸಾರ್ಟ್ ನಲ್ಲಿ ಬೀಡು ಬಿಟ್ಟಿರುವ ಕಾಂಗ್ರೆಸ್ ಶಾಸಕರು ಬಸ್ ನಲ್ಲಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆಂದು ತಿಳಿದುಬಂದಿದೆ. ಈ ಮಧ್ಯೆ ವಿಧಾನಸೌಧದ ಪಕ್ಕದಲ್ಲಿರುವ ಗಾಂಧಿ ಪ್ರತಿಮೆ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಪ್ರತಿಭಟನೆ ನಡೆಸಿದ್ದಾರೆ.

ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಕುದುರೆಗಳನ್ನು ಕರೆದುಕೊಂಡು ಬಂದು ವಿಭಿನ್ನವಾಗಿ ಪ್ರತಿಭಟಿಸಿದ್ದಾರೆ. ಅಲ್ಲದೇ ರಾಜ್ಯದ ವಿವಿಧ ಭಾಗಗಳಲ್ಲೂ ರಾಜ್ಯಪಾಲ ವಜೂಭಾಯ್ ವಾಲಾರ ತೀರ್ಮಾನದ ವಿರುದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...