alex Certify
ಕನ್ನಡ ದುನಿಯಾ       Mobile App
       

Kannada Duniya

ಕೆ.ಪಿ.ಸಿ.ಸಿ. ಕಚೇರಿಯಲ್ಲಿ ನಡೀತು ಹೈಡ್ರಾಮಾ

ಬೆಂಗಳೂರು: ಬೆಂಗಳೂರಿನ ಕೆ.ಪಿ.ಸಿ.ಸಿ ಕಚೇರಿಯಲ್ಲಿ ಇಂದು ಹೈಡ್ರಾಮಾವೇ ನಡೆದಿದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಫೋಟೋವನ್ನು ಕಾರ್ಯಕರ್ತನೊಬ್ಬ ತೆಗೆದಿಟ್ಟಿದ್ದು, ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನಾಯಕರು ಮತ್ತೆ ಫೋಟೋವನ್ನು ಮೊದಲಿದ್ದ ಸ್ಥಳದಲ್ಲೇ ಇರಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್, ಎಸ್.ಆರ್. ಪಾಟೀಲ್ ಅವರು, ಬಿ.ಬಿ.ಎಂ.ಪಿ. ಕಾಂಗ್ರೆಸ್ ಕಾರ್ಪೊರೇಟರ್ಸ್ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪಕ್ಷ ಸಂಘಟನೆ, ಸರ್ಕಾರದ ಯೋಜನೆಗಳನ್ನು ಜನರಿಗೆ ಪ್ರಚುರಪಡಿಸುವ ಕುರಿತಾಗಿ ಚರ್ಚೆ ನಡೆಸಲಾಗಿದೆ.

ಈ ವೇಳೆ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷರ ಫೋಟೋಗಳ ಸಾಲಿನಲ್ಲಿದ್ದ ಎಸ್.ಎಂ. ಕೃಷ್ಣ ಅವರ ಫೋಟೋವನ್ನು ಕಾರ್ಯಕರ್ತನೊಬ್ಬ ತೆಗೆದಿಟ್ಟಿದ್ದಾನೆ.

ಇದು ಗಮನಕ್ಕೆ ಬಂದ ಕೂಡಲೇ, ಕಚೇರಿಯ ಸಿಬ್ಬಂದಿ ಮತ್ತು ಪಕ್ಷದ ನಾಯಕರು ಗರಂ ಆಗಿ ಕೃಷ್ಣ ಅವರ ಫೋಟೋವನ್ನು ವಾಪಸ್ ಇರಿಸಿದ್ದಾರೆ.

ಈ ಕುರಿತಂತೆ ಪ್ರತಿಕ್ರಿಯೆ ನೀಡಿದ ಡಾ. ಜಿ. ಪರಮೇಶ್ವರ್, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ, ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ ಎಸ್.ಎಂ. ಕೃಷ್ಣ ಕಾರ್ಯನಿರ್ವಹಿಸಿದ್ದಾರೆ. ಅವರು ಈಗ ನಮ್ಮ ಪಕ್ಷದಲ್ಲಿ ಇಲ್ಲದಿರಬಹುದು. ಅವರು ಪಕ್ಷದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅವರ ಫೋಟೋ ತೆಗದಿದ್ದು ಸರಿಯಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕೆಲ ತಿಂಗಳ ಹಿಂದೆ ಕೃಷ್ಣ ಕಾಂಗ್ರೆಸ್ ತೊರೆದು ಬಿ.ಜೆ.ಪಿ. ಸೇರಿದಾಗ, ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಎಸ್.ಎಂ. ಕೃಷ್ಣರ ಫೋಟೋ ವಿರೂಪಗೊಳಿಸಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...