alex Certify
ಕನ್ನಡ ದುನಿಯಾ       Mobile App
       

Kannada Duniya

ಉತ್ತರದ ಮೂರು ಸಮಸ್ಯೆಗೆ ಒಂದು ಪರಿಹಾರ: ’ಕೈ’ ನಾಯಕರ ಹೊಸ ತಂತ್ರ

ಬೆಂಗಳೂರು: ಒಂದೆಡೆ ಉತ್ತರ ಕರ್ನಾಟಕದ ಪ್ರತ್ಯೇಕತೆಯ ಕೂಗು, ಇನ್ನೊಂದೆಡೆ ಉತ್ತರದ ಅಭಿವೃದ್ಧಿಗಾಗಿ ಹೋರಾಟಗಳು, ಈ ನಡುವೆ ಈ ವಿಷಯವನ್ನೇ ಪ್ರಮುಖವಾಗಿಟ್ಟುಕೊಂಡು ವಿಪಕ್ಷ ಬಿಜೆಪಿ ನಾಯಕರಿಂದ ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿಗಳ ಸುರಿಮಳೆ….ಈ ಎಲ್ಲಾ ಸಮಸ್ಯೆಗಳಿಗೂ ಒಂದೇ ಪರಿಹಾರವನ್ನು ಕಂಡುಕೊಳ್ಳಲು ಮುಂದಾಗಿರುವ ಕಾಂಗ್ರೆಸ್ ಸಮಿತಿಯೊಂದನ್ನು ರಚಿಸಲು ನಿರ್ಧರಿಸಿದೆ.

ಈ ಮೂಲಕ ಮೂರು ಸಮಸ್ಯೆಗಳಿಗೆ ಒಂದೇ ಪರಿಹಾರ ತಂತ್ರ ಹೆಣೆದಿದೆ. ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ನಂಜುಂಡಪ್ಪ ಸಮಿತಿ ಮಾದರಿಯಲ್ಲೇ ಒಂದು ಸಮಿತಿ ರಚಿಸುವುದು. ಈ ಸಮಿತಿ ಉತ್ತರ ಕರ್ನಾಟಕದ ಸಾರಿಗೆ, ರೈಲ್ವೆ, ವಿಮಾನಯಾನ, ಕೈಗಾರಿಕೆ, ಕೃಷಿ, ನೀರಾವರಿ ಸೇರಿದಂತೆ ಸಮಗ್ರ ಅಭಿವೃದ್ದಿ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸುತ್ತದೆ. ಸಮಿತಿ ವರದಿ ಆಧಾರದ ಮೇಲೆ ಅನುದಾನ ಬಿಡುಗಡೆ ಮಾಡುವುದು.

ಈ ಮೂಲಕ ಉತ್ತರದ ಸಮಸ್ಯೆ ನಿವಾರಣೆಗೆ ಕೈ ನಾಯಕರು ಮುಂದಾಗಿದ್ದಾರೆ. ಆದರೆ ಕಾಂಗ್ರೆಸ್ ನಾಯಕರ ಈ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಹೆಚ್‍.ಡಿ. ಕುಮಾರಸ್ವಾಮಿ ಸಮ್ಮತಿ ನೀಡುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...