alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ರಾಜಕೀಯದ ಹೈಡ್ರಾಮಾ ದೆಹಲಿಗೆ ಶಿಫ್ಟ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ವಿದ್ಯಮಾನಗಳು ನಡೆಯುತ್ತಿದ್ದು, ಹಲವು ದಿನಗಳಿಂದ ಸಮ್ಮಿಶ್ರ ಸರ್ಕಾರದಲ್ಲಿ ಆರಂಭವಾಗಿರುವ ರಾಜಕೀಯ ಹೈಡ್ರಾಮಾ, ಜಾರಕಿಹೊಳಿ ಸಹೋದರರ ಆಂತರಿಕ ಬಿಕ್ಕಟ್ಟಿನ ವಿಚಾರ ಈಗ ಹೈಕಮಾಂಡ್ ಅಂಗಳಕ್ಕೆ ಶಿಫ್ಟ್ ಆಗಿದೆ.

ಕಾಂಗ್ರೆಸ್ ನಲ್ಲಿ ಅಸಮಾಧಾನಗೊಂಡ ಶಾಸಕರು ಹಾಗೂ ಜಾರಕಿಹೊಳಿ ಸಹೋದರರನ್ನು ಸಮಾಧಾನಪಡಿಸುವಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿಫಲರಾದ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಧಾನ ಸಭೆಗಳು ನಡೆಯಲಿವೆ.

ಒಂದೆಡೆ ರಾಜ್ಯ ಸಮ್ಮಿಶ್ರ ಸರ್ಕಾರ ಉರುಳುವ ಭೀತಿಯಲ್ಲಿದ್ದು, ಇನ್ನೊಂದೆಡೆ ಸರ್ಕಾರ ರಚನೆಗೆ ಬಿಜೆಪಿ ತುದಿಗಾಲಲ್ಲಿ ನಿಂತಿದೆ. ಈ ಹಿನ್ನಲೆಯಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿಗೆ ಸರ್ಕಾರ ರಚನೆ ಅವಕಾಶ ನೀಡಬಾರದು ಎಂಬ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ.

ಇನ್ನು ಸಮ್ಮಿಶ್ರ ಸರ್ಕಾರದಲ್ಲಿ ಬಿಕ್ಕಟ್ಟು ಉದ್ಭವವಾಗಲು ಕಾರಣವಾಗಿರುವ ಜಾರಕಿಹೊಳಿ ಸಹೋದರರ ನಡೆ ಕೂಡ ನಿಗೂಢವಾಗಿದೆ. ತಮ್ಮೆಲ್ಲ ಅಸಮಾಧಾನ, ಸಮಸ್ಯೆಗಳೆಲ್ಲವನ್ನೂ ರಾಹುಲ್ ಗಾಂಧಿ ನೇತೃತ್ವದಲ್ಲೇ ಪರಿಹರಿಸಿಕೊಳ್ಳಬೇಕು ಎಂಬ ತೀರ್ಮಾನಕ್ಕೆ ಬಂದಿದ್ದು, ಹೈಕಮಾಂಡ್ ಜತೆಗಿನ ಚರ್ಚೆ ಬಳಿಕ ಜಾರಕಿಹೊಳಿ ಸಹೋದರರು ತಮ್ಮ ಮುಂದಿನ ನಡೆ ಕುರಿತು ನಿರ್ಧಾರ ಕೈಗೊಳ್ಳಲಿದ್ದಾರೆ. ಒಟ್ಟಾರೆ ಅಸಮಾಧಾನಗೊಂಡಿರುವ ಜಾರಕಿಹೊಳಿ ಸಹೋದರರನ್ನು ತಣ್ಣಗೆ ಮಾಡುವಲ್ಲಿ ಹೈಕಮಾಂಡ್ ಯಶಸ್ವಿಯಾಗುತ್ತಾ ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...