alex Certify
ಕನ್ನಡ ದುನಿಯಾ       Mobile App
       

Kannada Duniya

ಕರಾವಳಿಯಲ್ಲಿ ರಾಹುಲ್ ಗಾಂಧಿ ಜನಾಶೀರ್ವಾದ ಯಾತ್ರೆ

ಮಂಗಳೂರು: ವಿಧಾನಸಭೆ ಚುನಾವಣೆಗೆ ಈಗಾಗಲೇ ರಾಜ್ಯದಲ್ಲಿ 2 ಹಂತದ ಜನಾಶೀರ್ವಾದ ಯಾತ್ರೆ ಮೂಲಕ, ಪಕ್ಷದಲ್ಲಿ ಹುಮ್ಮಸ್ಸು ಮೂಡಿಸಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, ಇಂದಿನಿಂದ 3 ನೇ ಹಂತದ ಪ್ರವಾಸ ಕೈಗೊಂಡಿದ್ದಾರೆ.

ಬೆಳಿಗ್ಗೆ 11.30 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ, ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ನಡೆಸಲಿದ್ದಾರೆ. 12.55 ಕ್ಕೆ ಉಡುಪಿಯ ತೆಂಕ ಎರ್ಮಾಳು ಗ್ರಾಮಕ್ಕೆ ಭೇಟಿ ನೀಡಲಿದ್ದು, ರಾಜೀವ್ ಗಾಂಧಿ ಪೊಲಿಟಿಕಲ್ ಇನ್ಸ್ ಟಿಟ್ಯೂಟ್ ಉದ್ಘಾಟಿಸಲಿದ್ದಾರೆ.

1.45 ಕ್ಕೆ ಪಡುಬಿದ್ರೆಯಲ್ಲಿ ಕಾರ್ನರ್ ಮೀಟಿಂಗ್ ನಡೆಸಲಿರುವ ಅವರು, ಮಧ್ಯಾಹ್ನ 3.30 ಕ್ಕೆ ಮುಲ್ಕಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ಸಂಜೆ 4.30 ಕ್ಕೆ ಸುರತ್ಕಲ್ ನಲ್ಲಿ ರೋಡ್ ಶೋ, 5.20 ಕ್ಕೆ ಜ್ಯೋತಿ ಸರ್ಕಲ್ ನಲ್ಲಿ ಮೆರವಣಿಗೆ, 6.30 ಕ್ಕೆ ನೆಹರೂ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 7.30 ಕ್ಕೆ ಕುದ್ರೋಳಿ ಗೋಕರ್ಣನಾಥ ದೇವಾಲಯಕ್ಕೆ ಭೇಟಿ ನೀಡಲಿದ್ದು, ಬಳಿಕ ರೊಸಾರಿಯೋ ಚರ್ಚ್ ಹಾಗೂ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...