alex Certify
ಕನ್ನಡ ದುನಿಯಾ       Mobile App
       

Kannada Duniya

ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನಾಕಾಂಕ್ಷಿಗಳಿಗೆ ನಿರಾಸೆ

param-kpcc

ನವದೆಹಲಿ: ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿ ಡಾ. ಜಿ. ಪರಮೇಶ್ವರ್ ಅವರನ್ನೇ ಮುಂದುವರೆಸಲು ಹೈಕಮಾಂಡ್ ಮುಂದಾಗಿದ್ದು, ನಾಳೆ ಅಧಿಕೃತ ಘೋಷಣೆ ಹೊರ ಬೀಳಲಿದೆ.

ನವದೆಹಲಿಯಲ್ಲಿ ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷರ ಆಯ್ಕೆ ಕುರಿತಾಗಿ ವ್ಯಾಪಕ ಚರ್ಚೆ ನಡೆದಿದೆ.

ಅಧ್ಯಕ್ಷ ಸ್ಥಾನಕ್ಕೆ ಸಚಿವರಾದ ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್ ಹಾಗೂ ಎಸ್.ಆರ್. ಪಾಟೀಲ್ ಅವರ ಹೆಸರು ಮುಂಚೂಣಿಯಲ್ಲಿದ್ದವು. ಹಾಲಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರನ್ನೇ ಮುಂದುವರೆಸುವ ಕುರಿತಾಗಿಯೂ ಚರ್ಚೆ ನಡೆದಿತ್ತು. ಅಂತಿಮವಾಗಿ ಡಿ.ಕೆ. ಶಿವಕುಮಾರ್ ಮತ್ತು ಪರಮೇಶ್ವರ್ ಅವರಲ್ಲಿ ಒಬ್ಬರನ್ನು ಆಯ್ಕೆಮಾಡಲಾಗುವುದು ಎಂದು ಹೇಳಲಾಗಿತ್ತು.

ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಬಿ.ಕೆ. ಹರಿಪ್ರಸಾದ್, ಆಸ್ಕರ್ ಫರ್ನಾಂಡೀಸ್ ಮೊದಲಾದವರು ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸಿದ ಬಳಿಕ ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿ ಪರಮೇಶ್ವರ್ ಅವರನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ.

ವಿಧಾನಸಭೆ ಚುನಾವಣೆ ಸಮೀಪದಲ್ಲಿ ಅಧ್ಯಕ್ಷರನ್ನು ಬದಲಾವಣೆ ಮಾಡುವುದಕ್ಕಿಂತ ಪರಮೇಶ್ವರ್ ಅವರನ್ನೇ ಮುಂದುವರೆಸಬೇಕೆಂದು ಮಲ್ಲಿಕಾರ್ಜುನ ಖರ್ಗೆ ನೀಡಿದ ಸಲಹೆಯನ್ನು ಹೈಕಮಾಂಡ್ ಪರಿಗಣಿಸಿದೆ.

ಗೃಹ ಸಚಿವ ಸ್ಥಾನಕ್ಕೆ ಪರಮೇಶ್ವರ್ ರಾಜೀನಾಮೆ ನೀಡಿ ಅಧ್ಯಕ್ಷರಾಗಿ ಮುಂದುವರೆಯಲಿದ್ದು, ನಾಳೆ ಅಧಿಕೃತ ಘೋಷಣೆ ಹೊರ ಬೀಳಲಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...