alex Certify
ಕನ್ನಡ ದುನಿಯಾ       Mobile App
       

Kannada Duniya

ಯಾರಿಗೆ ಸಿಗಲಿದೆ ಕೆ.ಪಿ.ಸಿ.ಸಿ. ಸಾರಥ್ಯ..?

cong-kpcc

ನವದೆಹಲಿ: ಕಳೆದ ತಿಂಗಳು ಹಲವು ರಾಜ್ಯಗಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾವಣೆ ಮಾಡಿದ್ದರೂ, ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯನ್ನು ಬಾಕಿ ಉಳಿಸಿಕೊಳ್ಳಲಾಗಿತ್ತು.

ನವದೆಹಲಿಯಲ್ಲಿ ಇಂದು ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷರ ಆಯ್ಕೆ ಕುರಿತಾಗಿ ಪ್ರಮುಖ ತೀರ್ಮಾನ ಕೈಗೊಳ್ಳಲಿದ್ದು, ಸಂಜೆಯ ವೇಳೆಗೆ ನೂತನ ಅಧ್ಯಕ್ಷರ ನೇಮಕವಾಗಲಿದೆ.

ಸಚಿವರಾದ ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್ ಹಾಗೂ ಎಸ್.ಆರ್. ಪಾಟೀಲ್ ಅವರ ಹೆಸರು ಮುಂಚೂಣಿಯಲ್ಲಿವೆ. ಹಾಲಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರೇ ಮುಂದುವರೆಯುವ ಬಗ್ಗೆಯೂ ಚರ್ಚೆ ನಡೆದಿದೆ. ಅಂತಿಮವಾಗಿ ಡಿ.ಕೆ. ಶಿವಕುಮಾರ್ ಮತ್ತು ಪರಮೇಶ್ವರ್ ಅವರಲ್ಲಿ ಒಬ್ಬರನ್ನು ಆಯ್ಕೆಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಬಿ.ಕೆ. ಹರಿಪ್ರಸಾದ್, ಆಸ್ಕರ್ ಫರ್ನಾಂಡೀಸ್ ಮೊದಲಾದವರೊಂದಿಗೆ ರಾಹುಲ್ ಗಾಂಧಿ ಚರ್ಚೆ ನಡೆಸಿದ ಬಳಿಕ ಕೆ.ಪಿ.ಸಿ.ಸಿ. ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...