alex Certify
ಕನ್ನಡ ದುನಿಯಾ       Mobile App
       

Kannada Duniya

ಅತೃಪ್ತ ಕಾಂಗ್ರೆಸ್ ಶಾಸಕರಿಗೆ ಖಡಕ್ ಎಚ್ಚರಿಕೆ

ಬೆಂಗಳೂರು: ಪಕ್ಷದಲ್ಲಿದ್ದುಕೊಂಡೇ ಪಕ್ಷದ ವಿರುದ್ಧ ಮಾತನಾಡುವ ಅತೃಪ್ತ ಕಾಂಗ್ರೆಸ್ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ, ಕೆ.ಸಿ. ವೇಣುಗೋಪಾಲ್ ಪವರ್ ಗೇಮ್ ಗಳಿಗೆ ನಾವು ಬಗ್ಗಲ್ಲ. ಪಕ್ಷದಲ್ಲಿದ್ದೇ ಬ್ಲಾಕ್ ಮೇಲ್ ಮಾಡುವ ಆಟಗಳಿಗೂ ನಾವು ಹೆದರಲ್ಲ ಎಂದು ಹೇಳಿದ್ದಾರೆ.

ಕೆಪಿಸಿಸಿ ಕಛೇರಿಯಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ವೇಣುಗೋಪಾಲ್, ಶಾಸಕರಾದ ಎಂಟಿಬಿ ನಾಗರಾಜ್ ಹಾಗೂ ಸುಧಾಕರ್ ವಿರುದ್ಧ ಪರೋಕ್ಷವಾಗಿ, ಪಕ್ಷದಲ್ಲಿದ್ದುಕೊಂಡೇ ಒಬ್ಬರೋ ಇಬ್ಬರೋ ಆಟವಾಡಿದ್ರೆ ನಾವು ಸುಮ್ಮನಿರಲ್ಲ. ಈ ಪವರ್ ಗೇಮ್ ಗಳಿಗೆ ನಾವು ಬಗ್ಗಲ್ಲ. ಪಕ್ಷದಲ್ಲಿ ಶಿಸ್ತು ಉಲ್ಲಂಘಿಸಿದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಗುಡುಗಿದರು.

ಇನ್ನು ನಮ್ಮ ಶಾಸಕರನ್ನು ಸೆಳೆಯುವ ಬಿಜೆಪಿಯವರ ಬ್ಲಾಕ್ ಮೇಲ್ ಗೆ ನಾವು ಒಳಗಾಗಲ್ಲ. ನಮ್ಮ ಯಾವ ಶಾಸಕರೂ ಪಕ್ಷ ತೊರೆದು ಹೋಗುವುದಿಲ್ಲ. ಬಿಜೆಪಿಯವರ ಕುತಂತ್ರದ ರಾಜಕಾರಣವನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ ಎಂದು ಹೇಳಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...