alex Certify
ಕನ್ನಡ ದುನಿಯಾ       Mobile App
       

Kannada Duniya

ನಿರಾಶ್ರಿತ ಕೇಂದ್ರದಲ್ಲಿ ಅವ್ಯವಸ್ಥೆ: ರೊಚ್ಚಿಗೆದ್ದು ಪ್ರತಿಭಟನೆ, ತಹಶೀಲ್ದಾರ್ ಮೇಲೆ ಹಲ್ಲೆ

ಕುಶಾಲನಗರ: ಭೀಕರ ಮಳೆ, ಪ್ರವಾಹದಿಂದಾಗಿ ಮನೆ-ಮಠ ಕಳೆದುಕೊಂದು ನಿರಾಶ್ರಿತರ ಕೇಂದ್ರ ಸೇರಿರುವ ಕೊಡಗಿನ ಹಲವು ಸಂತ್ರಸ್ತರು ನಿರಾಶ್ರಿತ ಕೇಂದ್ರದಲ್ಲಿ ಮೂಲ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ನಿರ್ಲಕ್ಷ್ಯ ತೋರಿದ ತಹಶೀಲ್ದಾರ್ ಮೇಲೆಯೇ ಹಲ್ಲೆ ನಡೆಸಿದ ಘಟನೆ ಕುಶಾಲನಗರದ ವಾಲ್ಮೀಕಿ ಭವನದಲ್ಲಿ ನಡೆದಿದೆ.

ನಿರಾಶ್ರಿತ ಕೇಂದ್ರದಲ್ಲಿ ಸಮರ್ಪಕ ಶೌಚಾಲಯ ವ್ಯವಸ್ಥೆಯಾಗಲೀ, ಊಟದ ವ್ಯವಸ್ಥೆಯಾಗಲಿ ಇಲ್ಲದಾಗಿದೆ. ಈ ಬಗ್ಗೆ ಹಲವು ಬಾರಿ ತಹಶೀಲ್ದಾರ್ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಆದರೂ ಸ್ಪಂದಿಸದ ಹಿನ್ನಲೆಯಲ್ಲಿ ಆಕ್ರೋಶಗೊಂಡ ನಿರಾಶ್ರಿತರು ಪ್ರತಿಭಟನೆ ಆರಂಭಿಸಿದ್ದಾರೆ. ಪ್ರತಿಭಟನೆ ಹೆಚ್ಚಿದ ಹಿನ್ನಲೆಯಲ್ಲಿ ಎಚ್ಚೆತ್ತ ತಹಶೀಲ್ದಾರ್ ಮಹೇಶ್, ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ರೊಚ್ಚಿಗೆದ್ದ ಸಂತ್ರಸ್ತ ಪ್ರತಿಭಟನಾಕಾರರು, ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಮಹೇಶ್ ಮೇಲೆ ಕಲ್ಲು ತೂರಾಟ ನಡೆಸಿ ಹಲ್ಲೆ ನಡೆಸಿದ್ದಾರೆ. ತಕ್ಷಣ ತಹಶೀಲ್ದಾರ್ ಪ್ರತಿಭಟನಾಕಾರರಿಂದ ತಪ್ಪಿಸಿಕೊಂಡು ಪಾರಾಗಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಶ್ರೀವಿದ್ಯಾ, ಸಂತ್ರಸ್ಥರ ಸಮಸ್ಯೆಗಳನ್ನು ಆಲಿಸಿ, ನಿರಾಶ್ರಿತ ಕೇಂದ್ರದಲ್ಲಿ ಅಗತ್ಯ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...