alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಂಚ ಬಿಡುವು ನೀಡಿದ ವರುಣ, ತಗ್ಗಿದ ಪ್ರವಾಹ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮಳೆ ಅಬ್ಬರ ಕೊಂಚ ಕಡಿಮೆಯಾಗಿದ್ದು, ಪ್ರವಾಹ ಪರಿಸ್ಥಿತಿ ಹಾಗೂ ಮನೆಗಳಿಗೆ ನುಗ್ಗಿರುವ ನೀರು ತಗ್ಗಲಾರಂಭಿಸಿದೆ. ಈ ಹಿನ್ನಲೆಯಲ್ಲಿ ರಕ್ಷಣಾ ಕಾರ್ಯಾಚರಣೆಯೂ ಭರದ್ದಿಂದ ಸಾಗಿದ್ದು, ಜಿಲ್ಲೆ ಕ್ರಮೇಣ ಸಹಜ ಸ್ಥಿತಿಯತ್ತ ಸಾಗುತ್ತಿದೆ.

ಪ್ರವಾಹ ಕಡಿಮೆಯಾದ ಕಾರಣ ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆದ ಹಲವರು ತಮ್ಮ ಮನೆಗಳಿಗೆ ತೆರಳುತ್ತಿದ್ದಾರೆ. ಇನ್ನು ಮುಕ್ಕೋಡ್ಲು, ಕಾಲೂರು ಮತ್ತು ಮೂವತೊಕ್ಲುಗಳಲ್ಲಿ ಪ್ರವಾಹಕ್ಕೆ ಸಿಲುಕಿಕೊಂಡಿದ್ದವರನ್ನು ರಕ್ಷಿಸಲಾಗಿದೆ.

ನೀರಿನ ಮಟ್ಟ ಕಡಿಮೆಯಾಗಿರುವುದರಿಂದ ಪುನರ್ವಸತಿ ಕಾರ್ಯ ನಡೆಯುತ್ತಿದೆ. ಮಡಿಕೇರಿ ಸುತ್ತಮುತ್ತ ಎಲೆಕ್ಟ್ರಿಕ್ ಪೋಲ್ ಗಳನ್ನು ಸರಿಪಡಿಸುವ ಕೆಲಸ ಆರಂಭವಾಗಿದೆ. ಕುಶಾಲನಗರ ಸುತ್ತಮುತ್ತ ಸ್ವಚ್ಛತಾ ಕಾರ್ಯವೂ ಸಾಗಿದೆ.

ಆದರೆ ಮುಟ್ಲು, ಹಮ್ಮಿಯಾಲ ಮತ್ತು ಸುರ್ಲಬ್ಬಿ ಗ್ರಾಮಗಳಲ್ಲಿನ ಜನತೆ ಸ್ಥಳ ತೊರೆದು ಹೋಗಲು ನಿರಾಕರಿಸುತ್ತಿರುವುದರಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...