alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಡಗು ದುರಂತದ ಹಿಂದಿನ ‘ಅಸಲಿ’ ಕಾರಣ ಬಿಚ್ಚಿಟ್ಟ ತಜ್ಞರು

ಆಗಸ್ಟ್ ತಿಂಗಳಿನಲ್ಲಿ ಕುಂಭದ್ರೋಣ ಮಳೆಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಭೂ ಕುಸಿತದ ಕುರಿತು ಪರಿಶೀಲನೆ ನಡೆಸಿ, ಅಧ್ಯಯನ ಕೈಗೊಂಡಿದ್ದ ಭಾರತೀಯ ಭೂ ಸರ್ವೇಕ್ಷಣಾ ಇಲಾಖೆ ತಜ್ಞರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ಈ ದುರಂತ ‘ಮಾನವ ನಿರ್ಮಿತ’ವೆಂದು ತಜ್ಞರು ಅಭಿಪ್ರಾಯಪಟ್ಟಿದ್ದು, ಅತಿಯಾದ ಮಾನವ ಹಸ್ತಕ್ಷೇಪ ಹಾಗೂ ಅರಣ್ಯ ನಾಶ ಭೂ ಕುಸಿತಕ್ಕೆ ಕಾರಣ ಎಂದು ಹೇಳಿದ್ದಾರೆ. ಜುಲೈನಲ್ಲಿ ಉಂಟಾಗಿದ್ದ ಲಘು ಭೂಕಂಪ ಇದಕ್ಕೆ ಕಾರಣವಲ್ಲವೆಂದು ತಮ್ಮ ವರದಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಕೊಡಗಿನಲ್ಲಿ ಬೆಟ್ಟಗಳನ್ನು ಕಡಿದು ಅವೈಜ್ಞಾನಿಕವಾಗಿ ರಸ್ತೆ ನಿರ್ಮಿಸಲಾಗಿದೆ. ಕಾಫಿ ತೋಟ ನಿರ್ಮಾಣಕ್ಕೆ, ರೆಸಾರ್ಟ್, ಹೋಂ ಸ್ಟೇ ಸ್ಥಾಪಿಸಲು ಬೆಟ್ಟಗಳನ್ನು ಮಾರ್ಪಾಡು ಮಾಡಲಾಗಿದೆ. ಇದೆಲ್ಲದರ ಪರಿಣಾಮ ಏಕಾಏಕಿ ನುಗ್ಗಿದ ಮಳೆ ನೀರಿನಿಂದಾಗಿ ಬೆಟ್ಟಕ್ಕೆ ಹಾನಿಯಾಗಿದ್ದು, ಇದರಿಂದ ಭೂಕುಸಿತ ಉಂಟಾಗಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...