alex Certify
ಕನ್ನಡ ದುನಿಯಾ       Mobile App
       

Kannada Duniya

ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದ ಬಡ ಜನತೆಗೆ ಬಿಗ್ ಶಾಕ್: ಮೀಟರ್ ಬಡ್ಡಿ ದಂಧೆಕೋರರಿಗಿಲ್ಲ ಕಡಿವಾಣ?

ಬೆಂಗಳೂರು: ಮೀಟರ್ ಬಡ್ಡಿ ದಂಧೆಕೋರರ ಮೇಲೆ ಯಾವುದೇ ಕಾರಣಕ್ಕೂ ಪೊಲೀಸರು ಸುಮೋಟೋ (ಸ್ವಯಂ ಪ್ರೇರಿತ ದೂರು) ದಾಖಲಿಸಿಕೊಳ್ಳುವಂತಿಲ್ಲ.

‘ಟೈಮ್ಸ್ ಆಫ್ ಇಂಡಿಯಾ’ ವರದಿ ಪ್ರಕಾರ ಇಂಥದ್ದೊಂದು ಆದೇಶವನ್ನು ಸ್ವತಃ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್. ರಾಜು ಹೊರಡಿಸಿದ್ದು, ಎಲ್ಲ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆನ್ನಲಾಗಿದೆ.

ಇತ್ತೀಚೆಗಷ್ಟೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ವಿಧಾನಸೌಧದಲ್ಲಿ ಮಾತನಾಡುತ್ತಾ ಮೀಟರ್ ಬಡ್ಡಿ ದಂಧೆಕೋರರಿಗೆ ಶೀಘ್ರ ಕಡಿವಾಣ ಹಾಕಲಾಗುವುದು. ಈ ನಿಟ್ಟಿನಲ್ಲಿ ಬಡವರ ಬಂಧು ಯೋಜನೆ ಜಾರಿಗೆ ತರುವುದಾಗಿಯೂ ತಿಳಿಸಿದ್ದರು.

ಇದರ ಮಧ್ಯೆ, ಕೇಂದ್ರ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ನೇತೃತ್ವದಲ್ಲಿ ರಾಜ್ಯ ಸಿಸಿಬಿ ಪೊಲೀಸರ ತಂಡ, ವಿವಿಧೆಡೆ ದಾಳಿ ನಡೆಸಿ 69.16 ಲಕ್ಷ ರೂ., 258 ಚೆಕ್, 52 ಆನ್ ಡಿಮಾಂಡ್ ನೋಟುಗಳನ್ನು ವಶಕ್ಕೆ ಪಡೆದಿದ್ದರು. ಇದಾಗಿ ಎರಡೇ ದಿನಕ್ಕೆ ಈ ಆದೇಶ ಹೊರಬಿದ್ದಿದ್ದು, ಮೀಟರ್ ಬಡ್ಡಿ ದಂಧೆಕೋರರ ರಕ್ಷಣೆಗೆ ಸರ್ಕಾರ ನಿಂತಿದೆಯೇ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...