alex Certify
ಕನ್ನಡ ದುನಿಯಾ       Mobile App
       

Kannada Duniya

ದಂಪತಿ ಬೆದರಿಸಿ ಹಣ, ಚಿನ್ನಾಭರಣ ಲೂಟಿ

ತುಮಕೂರು: ದಂಪತಿಯನ್ನು ಬೆದರಿಸಿ ಮೊಬೈಲ್, ಹಣ, ಚಿನ್ನಾಭರಣ ದೋಚಿದ ಘಟನೆ ತುಮಕೂರು ಜಿಲ್ಲೆ ಮಧುಗಿರಿ ಸಮೀಪದ ಕಡಗತ್ತೂರು ಬಳಿ ನಡೆದಿದೆ.

ಅಂಗನವಾಡಿ ಕಾರ್ಯಕರ್ತೆ ರತ್ನಮ್ಮ ದಂಪತಿ, ತಮ್ಮ ಪುತ್ರನಿಗೆ ಹಿಂದೂಪುರದಲ್ಲಿ ಚಿಕಿತ್ಸೆ ಕೊಡಿಸಿ ಊರಿಗೆ ಬರುವ ಸಂದರ್ಭದಲ್ಲಿ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಇಂಡಿಕಾ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ದಂಪತಿಯನ್ನು ಬೆದರಿಸಿ ಹಣ, ಮೊಬೈಲ್, 25 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಕೊಡಿಗೇನಹಳ್ಳಿ ಠಾಣೆ ಪೊಲೀಸರಿಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...