alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ ಪರ ಕಾವೇರಿ ತೀರ್ಪು: ಎಲ್ಲೆಡೆ ಸಂಭ್ರಮಾಚರಣೆ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಇಂದು ಮಹತ್ವದ ತೀರ್ಪು ನೀಡಿದ್ದು, ರಾಜ್ಯಕ್ಕೆ ಪರೋಕ್ಷವಾಗಿ ಗೆಲುವು ಸಿಕ್ಕಿದೆ.

ರಾಜ್ಯದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಕರ್ನಾಟಕದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಪರಿಗಣಿಸಿ, ಹೆಚ್ಚುವರಿಯಾಗಿ 14.5 ಟಿ.ಎಂ.ಸಿ. ನೀರು ನೀಡಿದೆ. ತಮಿಳುನಾಡಿಗೆ ನೀರಿನ ಪ್ರಮಾಣ ಕಡಿತ ಮಾಡಿದೆ.

ಬೆಂಗಳೂರಿಗೆ 4.5 ಟಿಎಂಸಿ ಹೆಚ್ಚುವರಿ ಕುಡಿಯುವ ನೀರು ಬಳಸಲು ಮತ್ತು ಕರ್ನಾಟಕದಲ್ಲಿ ನೀರಾವರಿ ಪ್ರದೇಶ ವಿಸ್ತರಿಸಲು ಅವಕಾಶ ನೀಡಿದ್ದು, ಇದರಿಂದಾಗಿ ರಾಜ್ಯದಲ್ಲಿ ಸಂಭ್ರಮ ಮನೆ ಮಾಡಿದೆ.

ಮಂಡ್ಯ, ಮೈಸೂರಿನಲ್ಲಿ ಜನರೆಲ್ಲಾ ಬೀದಿಗಿಳಿದು ಸಂಭ್ರಮಿಸಿದ್ದಾರೆ. ಅನೇಕ ಕಡೆಗಳಲ್ಲಿ ಸಿಹಿ ಹಂಚಿ ಜನ ಸಂಭ್ರಮಾಚರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...