alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ್ದ ಜಡ್ಜ್ ವಜಾ

court 56

ಬೆಂಗಳೂರು: ನ್ಯಾಯಾಲಯದಲ್ಲಿ ಕೆಳ ಹಂತದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ್ದ ನ್ಯಾಯಾಧೀಶರೊಬ್ಬರನ್ನು ಸೇವೆಯಿಂದ ವಜಾಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲೆಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿದ್ದ ಎ. ಎನ್. ಹಕೀಂ ವಜಾಗೊಂಡವರು.

ಎ.ಎನ್. ಹಕೀಂ ಅವರು ಬೆಳಗಾವಿಯಲ್ಲಿ 2008 ರಿಂದ 5ನೇ ತ್ವರಿತಗತಿ ನ್ಯಾಯಾಲಯದಲ್ಲಿ ಪ್ರಿಸೈಡಿಂಗ್ ಅಧಿಕಾರಿಯಾಗಿದ್ದರು. 2009-10ರಲ್ಲಿ 4ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ, 2010-11ರಲ್ಲಿ 3ನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾಗಿ ಬಳಿಕ 2014ರಲ್ಲಿ ಎರಡನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾಗಿ ಸೇವೆಯಲ್ಲಿದ್ದರು. ಈ ಅವಧಿಯಲ್ಲಿ ಕೆಳಹಂತದಲ್ಲಿ ಕೆಲಸ ಮಾಡುವ ಜಡ್ಜ್ ಮೆಂಟ್ ರೈಟರ್, ಶೀಘ್ರ ಲಿಪಿಗಾರ್ತಿ ಹಾಗೂ ನಾಲ್ವರು ಮಹಿಳಾ ಸಿಬ್ಬಂದಿಗೆ ಅವರು ಲೈಂಗಿಕ ಕಿರುಕುಳ ನೀಡಿದ್ದರು ಎನ್ನಲಾಗಿದೆ.

ಈ ಆರೋಪಗಳಿಗೆ ಸಂಬಂಧಿಸಿದಂತೆ, ಹೈಕೋರ್ಟ್ ನ್ಯಾಯಮೂರ್ತಿ ವೇಣುಗೋಪಾಲಗೌಡ ನೇತೃತ್ವದ ಸಮಿತಿ ವಿಚಾರಣೆ ನಡೆಸಿ ವರದಿ ನೀಡಿತ್ತು. ಹಕೀಂ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ್ದು, ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ, ಹಕೀಂ ಅವರನ್ನು ವಜಾಗೊಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...