alex Certify
ಕನ್ನಡ ದುನಿಯಾ       Mobile App
       

Kannada Duniya

ಶಿಕ್ಷಕಿ ರೇಪ್ ಅಂಡ್ ಮರ್ಡರ್: ಹಳೆ ವಿದ್ಯಾರ್ಥಿಗಳಿಗೆ ಶಿಕ್ಷೆ

ರಾಮನಗರ: ಸರ್ಕಾರಿ ಶಾಲೆ ಶಿಕ್ಷಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ನಾಲ್ವರಿಗೆ ರಾಮನಗರ 3 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ರವಿ, ಮಂಜುನಾಥ, ರವೀಶ್ ಹಾಗೂ ನರಸಿಂಹ ಅವರಿಗೆ ನ್ಯಾಯಾಧೀಶರಾದ ಗೋಪಾಲಕೃಷ್ಣ ಅವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಬಸವನಪುರ ಗ್ರಾಮದ ಸರ್ಕಾರಿ ಶಾಲೆಯ ಹಳೆಯ ವಿದ್ಯಾರ್ಥಿಗಳಾಗಿದ್ದ ಈ ನಾಲ್ವರು, ಶಿಕ್ಷಕಿಗೆ ಡ್ರಾಪ್ ಕೊಡುವುದಾಗಿ ಕರೆದೊಯ್ದು, ಸಾವನದುರ್ಗ ಬಳಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಲ್ಲದೇ, ಚಿನ್ನಾಭರಣ ದೋಚಿದ್ದರು.

2009 ರ ಆಗಸ್ಟ್ 2 ರಂದು ಘಟನೆ ನಡೆದಿದ್ದು, ಬಿಡದಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಆರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...