alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ರಿಕೆಟ್ ಆಡುವಾಗಲೇ ನಡೆದಿದೆ ದುರಂತ

ಶಾಲಾ ಬಾಲಕರು ಕ್ರಿಕೆಟ್ ಆಡುವ ವೇಳೆ ಚೆಂಡು ಶೌಚಾಲಯದ ಮೇಲ್ಛಾವಣಿ ಮೇಲೆ ಬಿದ್ದಿದ್ದು, ಇದನ್ನು ತರಲೆಂದು ಹೋದ 12 ವರ್ಷದ ಬಾಲಕ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣದಲ್ಲಿ ನಡೆದಿದೆ.

ಶಿಗ್ಗಾಂವಿ ತಾಲೂಕಿನ ದುಂಡಸಿ ತಾಂಡಾದ ಸಂತೋಷ್ ಲಮಾಣಿ ಮೃತಪಟ್ಟ ಬಾಲಕನಾಗಿದ್ದು, ಈತ ವಿನಾಯಕ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದನೆಂದು ಹೇಳಲಾಗಿದೆ.

ಬಾಲಕ ಸಂತೋಷ್ ಇಂದು ಬೆಳಗ್ಗೆ ಸಹಪಾಠಿಗಳೊಂದಿಗೆ ಕ್ರಿಕೆಟ್ ಆಡುವಾಗ ಚೆಂಡು ಶಾಲೆಯ ಶೌಚಾಲಯದ ಮೇಲೆ ಬಿದ್ದಿದೆ. ಇದನ್ನು ತರಲೆಂದು ಕಟ್ಟಡದ ಮೇಲೆ ಹತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ಹಿರೇಕೆರೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...