alex Certify
ಕನ್ನಡ ದುನಿಯಾ       Mobile App
       

Kannada Duniya

ರಾತ್ರಿ ಮಲಗಿದ್ದ ಪತ್ನಿ ಬೆಳಗಾಗುವ ಹೊತ್ತಿಗೆ ಶವವಾಗಿದ್ದಳು

cng-murder

ರಾತ್ರಿ ಮಲಗಿದ್ದ ಪತ್ನಿಯನ್ನು ಪತಿ ಮಹಾಶಯನೊಬ್ಬ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಕೊಳ್ಳೇಗಾಲ ತಾಲೂಕಿನ ಹುಲ್ಲೇಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಹದೇವ ಹಾಗೂ ಪತ್ನಿ ರಾಧ ಇಬ್ಬರ ನಡುವೆ ಹಲವು ದಿನಗಳಿಂದ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಅಲ್ಲದೇ ಇತ್ತೀಚೆಗೆ ಇಬ್ಬರ ನಡುವಿನ ಸಂಬಂಧ ಹಳಸಿತ್ತು ಎನ್ನಲಾಗಿದ್ದು ಈ ನಡುವೆ ಪತ್ನಿಯ ವಿರುದ್ದ ಕಿಡಿ ಕಾರುತ್ತಿದ್ದ ಮಹಾದೇವ, ರಾಧ ಮಲಗಿದ್ದಾಗ ಕುತ್ತಿಗೆಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಈ ಕುರಿತು ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...