alex Certify
ಕನ್ನಡ ದುನಿಯಾ       Mobile App
       

Kannada Duniya

ಗ್ರಾಮಸ್ಥರಲ್ಲಿ ಆತಂಕ ಮೂಡಿಸಿರುವ ಬೃಹತ್ ಮೊಸಳೆಗಳು

Crocodile-Picturesಭೀಮಾ ನದಿಯಲ್ಲಿ ಎರಡು ಬೃಹತ್ ಮೊಸಳೆಗಳು ಪ್ರತ್ಯಕ್ಷವಾಗಿದ್ದು, ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನರಿಬೋಳ ಹಾಗೂ ಚಾಮನೂರಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಶಾಲಾ- ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಪ್ರತಿನಿತ್ಯ ತೆಪ್ಪದಲ್ಲಿ ನದಿ ದಾಟಿಕೊಂಡು ಹೋಗುತ್ತಿದ್ದು, ಈ ಬೃಹತ್ ಗಾತ್ರದ ಮೊಸಳೆಗಳ ಕಾರಣಕ್ಕಾಗಿ ಶಾಲಾ- ಕಾಲೇಜಿಗೆ ತೆರಳಲು ಭಯ ಪಡುತ್ತಿದ್ದಾರೆ.

ಅಲ್ಲದೇ ಗ್ರಾಮದ ಮಹಿಳೆಯರು ಬಟ್ಟೆ ತೊಳೆಯಲು ನದಿಗೆ ಹೋಗುತ್ತಿದ್ದು, ಮೊಸಳೆಗಳ ಕಾರಣಕ್ಕಾಗಿ ನದಿಗೆ ಹೋಗುವುದನ್ನು ನಿಲ್ಲಿಸಿದ್ದಾರೆ. ಸಂಬಂಧಪಟ್ಟವರು ಮೊಸಳೆಗಳನ್ನು ಹಿಡಿದು ಆತಂಕ ನಿವಾರಿಸಬೇಕೆಂದು ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...