alex Certify
ಕನ್ನಡ ದುನಿಯಾ       Mobile App
       

Kannada Duniya

‘ನಮ್ಮದೇ ಸರ್ಕಾರ, ರಣತಂತ್ರ ಬಹಿರಂಗಪಡಿಸಲು ಸಾಧ್ಯವಿಲ್ಲ’

ಬೆಂಗಳೂರು: ಬಿ.ಜೆ.ಪಿ. ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದರೂ, ಜನಾದೇಶಕ್ಕೆ ವಿರುದ್ಧವಾಗಿ ಅವರು ಸರ್ಕಾರ ರಚನೆಗೆ ಮುಂದಾಗಿದ್ದಾರೆ ಎಂದು ಶಾಸಕ ಸಿ.ಟಿ. ರವಿ ಟೀಕಿಸಿದ್ದಾರೆ.

ರಾಜ್ಯದಲ್ಲಿ ಬಿ.ಜೆ.ಪಿ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಆಹ್ವಾನ ನೀಡುವಂತೆ ಮನವಿ ಮಾಡಲಿದ್ದೇವೆ. ನಮ್ಮ ಪಕ್ಷ ಸರ್ಕಾರ ರಚಿಸಲಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜನಾದೇಶಕ್ಕೆ ವಿರುದ್ಧವಾಗಿ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಗೆ ಮುಂದಾಗಿದೆ ಎಂದು ಟೀಕಿಸಿದ ಅವರು, ಬಿ.ಜೆ.ಪಿ. ಸರ್ಕಾರ ರಚಿಸಲಿದೆ. ನಾವೂ ರಣತಂತ್ರ ರೂಪಿಸಿದ್ದೇವೆ. ಎಲ್ಲವನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...