alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿ ನಿರ್ಧಾರಕ್ಕೆ ಕಾಂಗ್ರೆಸ್ ಶಾಸಕ ಫುಲ್ ಖುಷ್

dgs

ದಾವಣಗೆರೆ: ಕಪ್ಪು ಹಣ ತಡೆಯುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು, ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹವಾಗಿದೆ ಎಂದು ಹೊನ್ನಾಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಂತನಗೌಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನ್ಯಾಮತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಇಂತಹ ನಿರ್ಧಾರ ಕೈಗೊಂಡಿರುವುದು ಮಹತ್ವದ್ದಾಗಿದೆ. ಅದೇ ರೀತಿ ಬೇನಾಮಿ ಆಸ್ತಿಗಳಿಗೂ ಕಡಿವಾಣ ಹಾಕಬೇಕು. ಒಬ್ಬರಿಗೆ 5 ಎಕರೆ ಜಮೀನು ಮತ್ತು 50 ಗ್ರಾಂ ಬಂಗಾರ ಮಾತ್ರ ಹೊಂದಲು ಅವಕಾಶ ನೀಡಬೇಕು. ಅದ್ಧೂರಿ ಮದುವೆಗಳಿಗೆ, ಐಷಾರಾಮಿ ಕಾರ್ ಗಳ ಖರೀದಿಗೆ ಕಡಿವಾಣ ಹಾಕಬೇಕು. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ನಿಯಮ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ಹಾಗೆ ಮಾಡಿದಲ್ಲಿ ಮೋದಿ ಅವರ ಪ್ರತಿಮೆಯನ್ನು ಮನೆಯಲ್ಲಿಟ್ಟು ಪೂಜಿಸುತ್ತೇನೆ ಎಂದು ಹೇಳಿದ್ದಾರೆ. 500 ರೂ. 1000 ರೂ. ರದ್ದುಪಡಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಅನೇಕ ನಾಯಕರು ವಿರೋಧಿಸಿದ್ದು, ಜನಸಾಮಾನ್ಯರಿಗೆ ತೊಂದರೆಯಾಗಿದೆ ಎಂದು ದೂರಿದ್ದಾರೆ.

ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರೇ ಮೋದಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದು, ಚರ್ಚೆಗೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...