alex Certify
ಕನ್ನಡ ದುನಿಯಾ       Mobile App
       

Kannada Duniya

ಯಾವುದೇ ಮಾಹಿತಿ ಮುಚ್ಚಿಡಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: ಐ.ಟಿ. ದಾಳಿ ಹಿನ್ನಲೆಯಲ್ಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಇಂದು ಕುಟುಂಬ ಸಮೇತರಾಗಿ ವಿಚಾರಣೆಗೆ ಹಾಜರಾಗಿದ್ದಾರೆ.

ಸುಮಾರು 2 ಗಂಟೆಗಳ ಕಾಲ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿದ್ದು, ಡಿ.ಕೆ. ಶಿವಕುಮಾರ್ ಕುಟುಂಬದವರು ಮಾತ್ರವಲ್ಲದೇ ಅವರ ಬಂಧುಗಳು, ಆಪ್ತರ ವಿಚಾರಣೆ ನಡೆಸಲಾಗಿದೆ.

ವಿಚಾರಣೆ ಮುಗಿಸಿ ಹೊರ ಬಂದ ಡಿ.ಕೆ. ಶಿವಕುಮಾರ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನನ್ನ ಜೀವನ ತೆರೆದ ಪುಸ್ತಕವಾಗಿದೆ. ಯಾವುದನ್ನು ಮುಚ್ಚಿಡುವುದಿಲ್ಲ. ನಾವು ಸಂವಿಧಾನ, ಕಾನೂನಿಗೆ ಗೌರವ ಕೊಡುತ್ತೇವೆ ಎಂದು ಹೇಳಿದ್ದಾರೆ.

ಐ.ಟಿ. ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನಲೆಯಲ್ಲಿ ಕುಟುಂಬ ಸಮೇತವಾಗಿ ಬಂದಿದ್ದೇವೆ. ತನಿಖೆಗೆ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುವುದು. ಅಧಿಕಾರಿಗಳು ಕೇಳಿದ ಮಾಹಿತಿಯನ್ನು ನೀಡಿದ್ದೇನೆ. ಮುಂದೆಯೂ ವಿಚಾರಣೆಗೆ ಬರುತ್ತೇನೆ ಎಂದು ತಿಳಿಸಿದ್ದಾರೆ.

ನನ್ನ ಬಾಯಿ ಮುಚ್ಚಿಸಲು ಹೀಗೆಲ್ಲಾ ಮಾಡಲಾಗುತ್ತಿದೆ ಎಂದು ಹೇಳಲು ಸಾಧ್ಯವಿಲ್ಲ. ನಾನು ಹಲವು ವರ್ಷಗಳಿಂದ ಪಕ್ಷ ಸಂಘಟನೆ, ಹೋರಾಟಗಳಲ್ಲಿ ಭಾಗಿಯಾಗಿದ್ದೇನೆ. ಬಹಳ ತನಿಖೆಗಳನ್ನು ನೋಡಿದ್ದೇನೆ. ಲೋಕಾಯುಕ್ತ, ಚುನಾವಣಾ ಆಯೋಗ, ಐ.ಟಿ.ಗೆ ನಮ್ಮ ಎಲ್ಲಾ ಮಾಹಿತಿಯನ್ನು ಹಿಂದೆಯೇ ನೀಡಲಾಗಿದೆ. ಯಾವುದೇ ತನಿಖೆಯನ್ನು ಎದುರಿಸಲು ನಾನು ಸಿದ್ಧವಾಗಿದ್ದೇನೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...