alex Certify
ಕನ್ನಡ ದುನಿಯಾ       Mobile App
       

Kannada Duniya

ಡಿ.ಕೆ.ಶಿ. ವಿರುದ್ಧ ಮತ್ತೊಂದು ಗಂಭೀರ ಆರೋಪ

dk-ed-duru

ನವದೆಹಲಿ: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಮನೆ, ಕಚೇರಿ ಹಾಗೂ ಆಪ್ತರ ಮನೆ ಮೇಲೆ ದಾಳಿ ಮಾಡಿರುವ ಐ.ಟಿ. ಅಧಿಕಾರಿಗಳು ಕಳೆದ 2 ದಿನಗಳಿಂದ ಪರಿಶೀಲನೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ರಾಮನಗರ ಜಿಲ್ಲೆಯ ವ್ಯಕ್ತಿಯೊಬ್ಬರು ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಿದ್ದಾರೆ. ನೋಟ್ ಬ್ಯಾನ್ ಮಾಡಿದ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ತಮ್ಮ ಆಪ್ತರ ಮೂಲಕ ಮಹಾಲಕ್ಷ್ಮಿ ಲೇಔಟ್ ನಲ್ಲಿ 2000 ಕೋಟಿ ರೂ. ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ತುಮಕೂರು ಜಿಲ್ಲೆ ಪಾವಗಡದಲ್ಲಿ ಸೋಲಾರ್ ಪಾರ್ಕ್ ನಿರ್ಮಾಣದಲ್ಲಿ ಭಾರೀ ಹಗರಣ ನಡೆಸಲಾಗಿದೆ. ಅಲ್ಲದೇ, ನೋಟ್ ಬ್ಯಾನ್ ಸಂದರ್ಭದಲ್ಲಿ ಭಾರೀ ಪ್ರಮಾಣದಲ್ಲಿ ಹಣ ವರ್ಗಾವಣೆ ಮಾಡಲಾಗಿದೆ ಎಂದು ದೂರಿದ್ದಾರೆ ಎನ್ನಲಾಗಿದೆ. ಪರಿಶೀಲನೆ ಬಳಿಕ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...