alex Certify
ಕನ್ನಡ ದುನಿಯಾ       Mobile App
       

Kannada Duniya

ಐ.ಟಿ. ವಿಚಾರಣೆಗೆ ಡಿ.ಕೆ. ಶಿವಕುಮಾರ್

mys-dks-d

ಬೆಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದ ಐ.ಟಿ. ನೋಟಿಸ್ ಜಾರಿಗೊಳಿಸಿದೆ.

ಡಿ.ಕೆ. ಶಿವಕುಮಾರ್ ಸೇರಿದಂತೆ ದಾಳಿಗೆ ಒಳಗಾಗಿದ್ದ ಎಲ್ಲರಿಗೂ ನೋಟಿಸ್ ಜಾರಿ ಮಾಡಿದ್ದು, ಬೆಂಗಳೂರಿನ ಐ.ಟಿ. ಕಚೇರಿಯಲ್ಲಿ ವಿಚಾರಣೆ ನಡೆಸಲಾಗುವುದು ಎನ್ನಲಾಗಿದೆ.

ಡಿ.ಕೆ. ಶಿವಕುಮಾರ್ ವಿಚಾರಣೆಗೆ ಹಾಜರಾಗಲಿದ್ದಾರೆ. ಸದಾಶಿವನಗರದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಪ್ರಕಾರ ವಿಚಾರಣೆಗೆ ಹಾಜರಾಗಲಿದ್ದೇನೆ. ಕಾನೂನಿಗೆ ಯಾರೂ ದೊಡ್ಡವರಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.

ದಾಳಿಯಲ್ಲಿ ಸಿಕ್ಕ ಸಂಪತ್ತಿನ ದಾಖಲೆಯನ್ನು ದೆಹಲಿಯಿಂದ ಆಗಮಿಸಿದ್ದ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಲಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...