alex Certify
ಕನ್ನಡ ದುನಿಯಾ       Mobile App
       

Kannada Duniya

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್

DK-Shivakumar

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಚಿವರಾದ ನಂತರ ಅವರ ಸ್ಥಾನಕ್ಕೆ ಯಾರನ್ನು ನೇಮಿಸಲಾಗುತ್ತದೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದ್ದು, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ನೇಮಿಸಲಾಗುವುದು.

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಬಳಿಕ, ಕಾಂಗ್ರೆಸ್ ಹೈಕಮಾಂಡ್, ಕರ್ನಾಟಕದಲ್ಲಿ ಪಕ್ಷ ಹಾಗೂ ಸರ್ಕಾರಕ್ಕೆ ಮೇಜರ್ ಸರ್ಜರಿ ಮಾಡಲು ಮುಂದಾಗಿದ್ದು, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಸಾರಥ್ಯ ವಹಿಸಲಾಗುವುದು ಎಂದು ಹೇಳಲಾಗಿದೆ. ವಿಧಾನಸಭೆಯಿಂದ ರಾಜ್ಯಸಭೆ ಹಾಗೂ ವಿಧಾನಪರಿಷತ್ ಸದಸ್ಯರ ಆಯ್ಕೆಗೆ ಜೂನ್ 10 ಮತ್ತು 11ರಂದು ಚುನಾವಣೆ ನಡೆಯಲಿದ್ದು, ಇದಾದ ನಂತರ, ಡಿ.ಕೆ.ಶಿವಕುಮಾರ್ ಅವರನ್ನು ನೇಮಕ ಮಾಡಲಾಗುವುದು ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ವೀರಶೈವ ಇಲ್ಲವೇ ಒಕ್ಕಲಿಗರನ್ನು ನೇಮಕ ಮಾಡಲು ತೀರ್ಮಾನಿಸಿ ಕೆಲವರ ಹೆಸರನ್ನು ಪರಿಗಣಿಸಲಾಗಿತ್ತಾದರೂ, ಅಂತಿಮವಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನೇ ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...