alex Certify
ಕನ್ನಡ ದುನಿಯಾ       Mobile App
       

Kannada Duniya

ಐ.ಟಿ. ದಾಳಿ ಪ್ರಕರಣ: ಕೋರ್ಟ್ ಗೆ ಹಾಜರಾದ ಡಿ.ಕೆ.ಶಿ.

ಬೆಂಗಳೂರು: ಐ.ಟಿ. ಅಧಿಕಾರಿಗಳು ಪಕ್ಷಪಾತ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ. ಇದೇ ವೇಳೆ ಐ.ಟಿ. ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂಧನ ಸಚಿವ ಡಿ.ಕೆ. ಶಿವಕುಮಾರ್ ಕೋರ್ಟ್ ಗೆ ಹಾಜರಾಗಿದ್ದಾರೆ.

ರಾಮನಗರ ಬಿಡದಿ ಬಳಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ಐ.ಟಿ. ದಾಳಿ ನಡೆದಾಗ, ಸಾಕ್ಷ್ಯ ನಾಶ ಮಾಡಿದ ಹಾಗೂ ದಾಖಲೆ ಹರಿದು ಹಾಕಿದ ಮತ್ತು ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಐ.ಟಿ.ಯಿಂದ ಡಿ.ಕೆ. ಶಿವಕುಮಾರ್ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಆರ್ಥಿಕ ಅಪರಾಧಗಳ ಕೋರ್ಟ್ ನಿಂದ ಸಮನ್ಸ್ ಜಾರಿಯಾದ ಹಿನ್ನಲೆಯಲ್ಲಿ ಶಿವಕುಮಾರ್ ಕೋರ್ಟ್ ಗೆ ಹಾಜರಾಗಿದ್ದಾರೆ. ಡಿ.ಕೆ. ಶಿವಕುಮಾರ್ ವಿರುದ್ಧ ಐ.ಪಿ.ಸಿ. ಸೆಕ್ಷನ್ 201, 204 ಹಾಗೂ ಐ.ಟಿ. ಕಾಯ್ದೆ 271 ಸೇರಿದಂತೆ ವಿವಿಧ ಸೆಕ್ಷನ್ ನಡಿ ಪ್ರಕರಣ ದಾಖಲಿಸಲಾಗಿದೆ.  ಇಂದು ವಿಚಾರಣೆ ನಡೆಯಲಿದ್ದು, ಮುಂದೇನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...