alex Certify
ಕನ್ನಡ ದುನಿಯಾ       Mobile App
       

Kannada Duniya

KPCC ಪ್ರಚಾರ ಸಮಿತಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್

dk-kpcc

ನವದೆಹಲಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆ.ಪಿ.ಸಿ.ಸಿ.) ಅಧ್ಯಕ್ಷರಾಗಿ ಡಾ. ಜಿ. ಪರಮೇಶ್ವರ್ ಅವರು ಮುಂದುವರೆಯಲಿದ್ದಾರೆ.

ಎ.ಐ.ಸಿ.ಸಿ.ಯಿಂದ ಈ ಕುರಿತು ಮಾಧ್ಯಮ ಪ್ರಕಟಣೆ ನೀಡಲಾಗಿದ್ದು, ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿ ಪರಮೇಶ್ವರ್ ಅವರನ್ನು ಮತ್ತೆ ನೇಮಕ ಮಾಡಲಾಗಿದೆ.

ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷರಾಗಿ ಎಸ್.ಆರ್. ಪಾಟೀಲ್, ಪ್ರಚಾರ ಸಮಿತಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್, ಎ.ಐ.ಸಿ.ಸಿ. ಕಾರ್ಯದರ್ಶಿಯಾಗಿ ಸತೀಶ್ ಜಾರಕಿಹೊಳಿ, CWC ವಿಶೇಷ ಆಹ್ವಾನಿತರಾಗಿ ಕೆ.ಹೆಚ್. ಮುನಿಯಪ್ಪ ಅವರನ್ನು ನೇಮಕ ಮಾಡಲಾಗಿದೆ.

ಸಿ.ಎಂ. ಸಿದ್ಧರಾಮಯ್ಯನವರ ನೇತೃತ್ವದಲ್ಲಿಯೇ ಚುನಾವಣೆ ನಡೆಸಲಾಗುವುದು. ತಕ್ಷಣದಿಂದಲೇ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪರಮೇಶ್ವರ್ ಅವರಿಗೆ ಎ.ಐ.ಸಿ.ಸಿ. ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಕೆ.ಜೆ. ಜಾರ್ಜ್ ಅವರಿಗೆ ಗೃಹ ಖಾತೆಯನ್ನು ಮತ್ತೆ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...