alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ಮೇಲುಗೈ ಸಾಧಿಸಿದ ಸಿ.ಎಂ. ಸಿದ್ಧರಾಮಯ್ಯ

BANGALORE, OCTOBER 02, 2013 : Karnataka Chief Minister Siddaramaiah is seen in a Walk the Talk shoot with the chief editor of Indian Express, Shekhar Gupta at the Vidhana Soudha, Bangalore, for NDTV. (PHOTO BY JYOTHY KARAT)

ಮುಂದಿನ ವಿಧಾನಸಭೆ ಚುನಾವಣೆಗಾಗಿ ರಾಜ್ಯ ಕಾಂಗ್ರೆಸ್ ಗೆ ಹೊಸ ಟೀಂ ರೆಡಿಯಾಗಿದೆ. ಕೆ.ಪಿ.ಸಿ.ಸಿ. ಆಧ್ಯಕ್ಷರಾಗಿ ಡಾ. ಜಿ. ಪರಮೇಶ್ವರ್ ಅವರೇ ಮುಂದುವರೆಯಲಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಹೈಕಮಾಂಡ್ ತಿಳಿಸಿದೆ.

ಇನ್ನು ಈಗಾಗಲೇ ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಅವರೊಂದಿಗೆ ಎಸ್.ಆರ್. ಪಾಟೀಲ್ ಅವರಿಗೆ ಕಾರ್ಯಾಧ್ಯಕ್ಷ ಹುದ್ದೆಯನ್ನು ನೀಡಲಾಗಿದೆ. ಸತೀಶ್ ಜಾರಕಿಹೊಳಿ ಅವರಿಗೆ ಎ.ಐ.ಸಿ.ಸಿ. ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಕೆ.ಪಿ.ಸಿ.ಸಿ. ಪ್ರಚಾರ ಸಮಿತಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಈ ಮೂಲಕ ಎಲ್ಲಾ ಪ್ರಮುಖ ವರ್ಗಗಳಿಗೆ ಪ್ರಾತಿನಿಧ್ಯ ನೀಡುವ ಪ್ರಯತ್ನವನ್ನು ಹೈಕಮಾಂಡ್ ಮಾಡಿದೆ. ಪರಮೇಶ್ವರ್ ಬದಲಿಸಿದರೆ, ದಲಿತ ಮತಬ್ಯಾಂಕ್ ಗೆ ಹಿನ್ನಡೆಯಾಗಬಹುದೆಂದು ಅವರನ್ನೇ ಮುಂದುವರೆಸಲಾಗಿದೆ. ಚುನಾವಣೆ ಹತ್ತಿರದಲ್ಲಿರುವಾಗ ದಲಿತ ಸಮುದಾಯಕ್ಕೆ ಸೇರಿದವರನ್ನು ಬದಲಿಸಿದರೆ, ದೊಡ್ಡ ಸಮುದಾಯ ದೂರವಾಗಬಹುದೆಂಬ ಆಲೋಚನೆ ಇದರ ಹಿಂದಿದೆ. ಹಾಗಾಗಿ ಜಾರಕಿಹೊಳಿ ಅವರಿಗೂ ಸ್ಥಾನ ನೀಡಲಾಗಿದೆ. ಒಕ್ಕಲಿಗರು, ಲಿಂಗಾಯತರಿಗೂ ಅವಕಾಶ ನೀಡಲಾಗಿದೆ. ಈ ಮೂಲಕ ಎಲ್ಲಾ ವರ್ಗದವರಿಗೂ ನಾಯಕತ್ವ ನೀಡಿದಂತಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದ್ದು, ಎಲ್ಲರೂ ಭಿನ್ನಾಭಿಪ್ರಾಯ ಮರೆತು ಒಟ್ಟಿಗೆ ಸಾಗಬೇಕೆಂದು ಹೇಳಲಾಗಿದೆ.

ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನಕ್ಕೆ ಹೊಸ ನೇಮಕಾತಿ ನಡೆದಿದ್ದಲ್ಲಿ ಎಸ್.ಆರ್. ಪಾಟೀಲ್ ಇಲ್ಲವೇ ಎಂ.ಬಿ. ಪಾಟೀಲ್ ಅವರನ್ನು ನೇಮಿಸುವ ಬಗ್ಗೆ ಸಿದ್ಧರಾಮಯ್ಯ ಸಲಹೆ ನೀಡಿದ್ದರೆನ್ನಲಾಗಿದೆ. ಒಂದು ವೇಳೆ ಡಿ.ಕೆ. ಶಿವಕುಮಾರ್ ಅಧ್ಯಕ್ಷರಾಗಿದ್ದಲ್ಲಿ ಪಕ್ಷದ ಮೇಲಿನ ಹಿಡಿತ ಕಡಿಮೆಯಾಗಬಹುದೆಂಬ ಭಾವನೆ ಇದ್ದರೂ ಇರಬಹುದು.

ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯದ ಕಾಂಗ್ರೆಸ್ ನಾಯಕರೊಂದಿಗೆ ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ಸಮಾಲೋಚನೆ ನಡೆಸಿದ ಬಳಿಕ ಎಲ್ಲರನ್ನೂ ಸಮಾಧಾನಪಡಿಸುವಂತೆ ನೇಮಕಾತಿ ಮಾಡಲಾಗಿದೆ. ಪರಮೇಶ್ವರ್ ಅವರಿಗೆ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ.

ಚುನಾವಣೆಗೆ ಹೊಸ ಟೀಂ ರೆಡಿಯಾಗಿದ್ದರೂ, ಸಿದ್ಧರಾಮಯ್ಯನವರ ನೇತೃತ್ವದಲ್ಲಿಯೇ ಚುನಾವಣೆ ನಡೆಯುವುದರಿಂದ ಅವರು ಮೇಲುಗೈ ಸಾಧಿಸಿದಂತಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...