alex Certify
ಕನ್ನಡ ದುನಿಯಾ       Mobile App
       

Kannada Duniya

ಲೋಡ್ ಶೆಡ್ಡಿಂಗ್ ಇಲ್ಲ: ಡಿ.ಕೆ. ಶಿವಕುಮಾರ್

ಉಡುಪಿ: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಗುರುವಾರ ಪತ್ನಿ ಸಮೇತರಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ತೆರಳಿ ಚಂಡಿಕಾ ಹೋಮ, ವಿಶೇಷ ಪೂಜೆ ನೆರವೇರಿಸಿದ್ದಾರೆ.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ.

ರೈತರು ಮತ್ತು ಎಲ್ಲಾ ವರ್ಗದ ಜನರಿಗೆ ನೀಡಲಾಗಿರುವ ಭರವಸೆಯಂತೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ವಿದ್ಯುತ್ ಕೊರತೆಯಾಗದಂತೆ ಖರೀದಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರ ನೀಡಿದ ಭರವಸೆಯಂತೆ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಯಾತ್ರೆ ಕೈಗೊಳ್ಳಲಾಗಿದೆ. ಹೈಕಮಾಂಡ್ ಸೂಚನೆಯಂತೆ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಯಾತ್ರೆ ಕೈಗೊಂಡಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...