alex Certify
ಕನ್ನಡ ದುನಿಯಾ       Mobile App
       

Kannada Duniya

ಕೃಷಿಕರಿಗೆ ಇಲ್ಲಿದೆ ಗುಡ್ ನ್ಯೂಸ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ವಿದ್ಯುತ್ ಉಪಕೇಂದ್ರಗಳಿಗೆ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೃಷಿ ಪಂಪ್ ಸೆಟ್ ಗಳಿಗೆ 6 -7 ಗಂಟೆಗಳ ಕಾಲ ವಿದ್ಯುತ್ ನೀಡಲಾಗ್ತಿದೆ. ಹಗಲಿನಲ್ಲಿಯೂ 6 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಸರಬರಾಜು ಮಾಡುವ ಚಿಂತನೆ ಇದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿನ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದರೂ, ವಿದ್ಯುತ್ ಕೊರತೆಯಾಗದಂತೆ ಪೂರೈಕೆ ಮಾಡಲಾಗ್ತಿದೆ. ರಾಜ್ಯದಲ್ಲಿ ಸುಮಾರು 25 ಲಕ್ಷ ಕೃಷಿ ಪಂಪ್ ಸೆಟ್ ಗಳಿವೆ. 5 ಲಕ್ಷ ಪಂಪ್ ಸೆಟ್ ಅಕ್ರಮ ಸಕ್ರಮದ ಅನ್ವಯ ಅಧಿಕೃತಗೊಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಕೆಲವು ಪ್ರದೇಶಗಳಲ್ಲಿ ರಾತ್ರಿ ವಿದ್ಯುತ್ ಪೂರೈಕೆ ಮಾಡುವುದರಿಂದ ಕೃಷಿಕರಿಗೆ ಜಮೀನಿಗೆ ತೆರಳಲು ಸಮಸ್ಯೆಯಾಗುತ್ತದೆ. ಹಗಲಿನಲ್ಲಿ ನಿರಂತರವಾಗಿ 6 ಗಂಟೆ ವಿದ್ಯುತ್ ಪೂರೈಕೆಗೆ ಬೇಡಿಕೆ ಇದ್ದು, ಸೋಲಾರ್ ವಿದ್ಯುತ್ ಹೆಚ್ಚಿನ ಬಳಕೆಗೆ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...