alex Certify
ಕನ್ನಡ ದುನಿಯಾ       Mobile App
       

Kannada Duniya

ಕೃಷಿಕರಿಗೆ ಖುಷಿ ಸುದ್ದಿ ನೀಡಿದ ಡಿ.ಕೆ. ಶಿವಕುಮಾರ್

ರಾಯಚೂರು: ರಾಯಚೂರು ಹೊರವಲಯದ ಯರಮರಸ್ ಸೂಪರ್ ಕ್ರಿಟಿಕಲ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ(YTPS) ವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಗಳವಾರ ಉದ್ಘಾಟಿಸಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಇಂಧನ ಸಚಿವ ಡಿ.ಕೆ. ಶಿವಕುಮಾರ್, ಕೃಷಿಕರ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಅಗತ್ಯವಿರುವಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲಾಗುತ್ತಿದೆ. ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚು ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಪಾವಗಡದಲ್ಲಿ ಅತಿದೊಡ್ಡ ಸೌರ ವಿದ್ಯುತ್ ಪಾರ್ಕ್, ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರ, ವೈ.ಟಿ.ಪಿ.ಎಸ್. ಘಟಕ ಕಾರ್ಯಾರಂಭ ಮಾಡಿವೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...