alex Certify
ಕನ್ನಡ ದುನಿಯಾ       Mobile App
       

Kannada Duniya

ಬಂಧನ ಭೀತಿಯಲ್ಲಿ ಡಿ.ಕೆ. ಶಿವಕುಮಾರ್

ಇಂದು ಬೆಳಗ್ಗೆಯಿಂದ ರಾಜ್ಯ ರಾಜಕಾರಣದಲ್ಲಿ ಬಿಸಿ ವಾತಾವರಣ ಸೃಷ್ಟಿಸಿರುವ ಡಿ.ಕೆ. ಶಿವಕುಮಾರ್ ಆಪ್ತರ ಮೇಲಿನ ಸಿಬಿಐ ಸರ್ಚ್ ವಾರೆಂಟ್ ಹಾಗೂ 11 ಕಡೆ ನಡೆಸಿದ ದಾಳಿ ಪ್ರಕರಣ ಈಗ ಹೊಸ ತಿರುವು ಪಡೆಯುತ್ತಿದ್ದು, ಡಿ.ಕೆ. ಶಿವಕುಮಾರ್ ಅವರಿಗೆ ಬಂಧನದ ಭೀತಿ ಎದುರಾಗಿದೆ.

ಇಂದು ಬೆಳಗ್ಗೆಯಿಂದ ನಡೆಯುತ್ತಿರುವ ಈ ಹೈಡ್ರಾಮಾದಲ್ಲಿ ಆರೋಪ-ಪ್ರತ್ಯಾರೋಪಗಳು ನಡೆದವು. ಬಿಜೆಪಿ ಕೇಂದ್ರ ಸರ್ಕಾರದ ಸಹಾಯದಿಂದ ನನ್ನ ಮೇಲೆ ಬ್ರಹ್ಮಾಸ್ತ್ರ ಉಪಯೋಗಿಸುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದ್ದರೆ, ಬಿಜೆಪಿ ಮುಖಂಡರು ಡಿ.ಕೆ. ಶಿವಕುಮಾರ್ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪ ಹೇಳಿದ್ದರು. ಜೊತೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಹರಿಹಾಯ್ದಿದ್ದರು.

ಆದರೂ ಸರ್ಚ್ ವಾರೆಂಟ್ ಮೂಲಕ ದಾಳಿಗಿಳಿದ ಸಿಬಿಐ, 11 ಕಡೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ. ನೋಟ್ ಬ್ಯಾನ್ ಸಂಧರ್ಭದಲ್ಲಿ ಅಕ್ರಮವಾಗಿ ಹಣ ವಿನಿಮಯ ಮಾಡಿದ ಆರೋಪ ಆರ್ಥಿಕ ವ್ಯವಹಾರ ಇಲಾಖೆಯಿಂದ ಬಂದ ಹಿನ್ನೆಲೆಯಲ್ಲಿ ಸರ್ವೆಗಿಳಿದ ಸಿಬಿಐ, ಅಕ್ರಮ ಆಸ್ತಿ, ಹಣಗಳಿಕೆ ಸಂಬಂಧಿಸಿದಂತೆ ದಾಖಲೆಗಳನ್ನು ಪರಿಶೀಲಿಸುತ್ತಿದೆ. ದಾಳಿಯ ಬಗ್ಗೆ ಡಿ.ಕೆ. ಶಿವಕುಮಾರ್ ಅವರಿಗೆ ಮಾಹಿತಿ ಮೊದಲೇ ಸಿಕ್ಕಿದ್ದು ಹೇಗೆ ಎಂಬ ಬಗ್ಗೆ ಈಗ ವಿಶೇಷ ತನಿಖೆ ಆರಂಭವಾಗಿದ್ದು, ಜೊತೆಗೆ ಡಿ.ಕೆ. ಶಿವಕುಮಾರ್ ಅವರಿಗೆ ಬಂಧನದ ಭೀತಿ ಎದುರಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...