alex Certify
ಕನ್ನಡ ದುನಿಯಾ       Mobile App
       

Kannada Duniya

ಸಹೋದರನ ತುರ್ತು ಪತ್ರಿಕಾಗೋಷ್ಠಿ ಕುರಿತು ಡಿಕೆಶಿ ಹೇಳಿದ್ದೇನು?

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ಸಹೋದರ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಇಂದು ಬೆಳಗ್ಗೆ ಸದಾಶಿವನಗರದ ನಿವಾಸದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ತಮ್ಮ ಕುಟುಂಬದ ವಿರುದ್ಧ ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ್, ತಮ್ಮ ಸಹೋದರ ಖಚಿತ ಮಾಹಿತಿ ಪಡೆದುಕೊಂಡೇ ಈ ಆರೋಪ ಮಾಡಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಾಜಕೀಯ ಉದ್ದೇಶದಿಂದ ನಮ್ಮೊಂದಿಗಿರುವವರಿಗೆ ಕಿರುಕುಳ ನೀಡುತ್ತಿದೆ. ಇದಕ್ಕೆ ನಾವುಗಳು ಜಗ್ಗುವುದಿಲ್ಲ ಎಂದರು.

ಸಿಬಿಐ ಅಧಿಕಾರಿಗಳು ಡಿ.ಕೆ. ಸುರೇಶ್ ಸೇರಿದಂತೆ 11 ಮಂದಿಯ ವಿರುದ್ಧ ಸರ್ಚ್ ವಾರೆಂಟ್ ಪಡೆದುಕೊಂಡಿದೆ ಎನ್ನಲಾಗಿದ್ದು, ಈ ವಿಚಾರ ಬಹಿರಂಗವಾಗುತ್ತಿದ್ದಂತೆ ಅನೇಕ ಹಿತೈಷಿಗಳು ದೂರವಾಣಿ ಕರೆ ಮಾಡಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿ ಏನೇ ಸೇಡಿನ ರಾಜಕಾರಣ ಮಾಡಿದರೂ ಅದಕ್ಕೆ ಬೆದರುವುದಿಲ್ಲವೆಂದು ಡಿ.ಕೆ. ಶಿವಕುಮಾರ್ ಹೇಳಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...