alex Certify
ಕನ್ನಡ ದುನಿಯಾ       Mobile App
       

Kannada Duniya

ನನ್ನ ಮತ್ತು ರೇವಣ್ಣ ನಡುವೆ ಹಗ್ಗಜಗ್ಗಾಟವಿಲ್ಲ: ಡಿ.ಕೆ.ಶಿ

ಹಣಕಾಸು ಖಾತೆಗೆ ಸಂಬಂಧಿಸಿದಂತೆ ನನ್ನ ಮತ್ತು ಜೆಡಿಎಸ್ ಮುಖಂಡ ಹೆಚ್.ಡಿ. ರೇವಣ್ಣನವರ ನಡುವೆ ಯಾವುದೇ ಗೊಂದಲವಾಗಲಿ, ಹಗ್ಗಜಗ್ಗಾಟವಾಗಲಿ ಇಲ್ಲ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಅವರು ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿ ಮಾತನಾಡುತ್ತಾ, ನಾನು ಯಾವುದೇ ಖಾತೆಗೆ ಲಾಬಿ ನಡೆಸಿಲ್ಲ, ನನಗೆ ಇಂಥದ್ದೇ ಖಾತೆ ಬೇಕು ಎಂದು ಎಲ್ಲಿಯೂ ಯಾರ ಬಳಿಯೂ ಕೇಳಿಲ್ಲ,. ಪಕ್ಷದ ಪ್ರಮುಖರು ನೀಡುವ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಮೈತ್ರಿ ಸರ್ಕಾರಕ್ಕೆ ಯಾವುದೇ ಕಂಟಕವಿಲ್ಲ. 5 ವರ್ಷ ಸುಭದ್ರ ಸರ್ಕಾರ ನಡೆಯಲಿದೆ. ವೃಥಾ ಗೊಂದಲಗಳನ್ನು ಸೃಷ್ಟಿಸಲಾಗುತ್ತಿದೆ. ಸಚಿವ ಸಂಪುಟ ರಚನೆಗೆ ಸಂಬಂಧಿಸಿದ ಸಮಸ್ಯೆ ಶೀಘ್ರವೇ ಬಗೆಹರಿಯಲಿದೆ. ಸಂಪುಟ ರಚನೆ ಸುಸೂತ್ರವಾಗಿ ನಡೆಯಲಿದೆ ಎಂದರು.

ರೈತರ ಸಾಲಮನ್ನಾ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟವರು ಚರ್ಚೆ ನಡೆಸಿ ಒಳ್ಳೆಯ ಕ್ರಮವನ್ನು ಕೈಗೊಳ್ಳಲಿದ್ದಾರೆ, ಮಾಧ್ಯಮಗಳು ತಾಳ್ಮೆಯಿಂದ ಇರಬೇಕು ಅಷ್ಟೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...