alex Certify
ಕನ್ನಡ ದುನಿಯಾ       Mobile App
       

Kannada Duniya

ಸವಾರ ಸಾವು: ಉದ್ರಿಕ್ತರಿಂದ ಬಸ್ ಗೆ ಕಲ್ಲು

darawad-bus

ಧಾರವಾಡ: ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ, ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕಣವಿ ಹೊನ್ನಾಪುರ ಗ್ರಾಮದ ಬಳಿ ನಡೆದಿದೆ.

ಜಿ. ಬಸವನಕೊಪ್ಪ ಗ್ರಾಮದ ಮಂಜುನಾಥ್(24) ಮೃತಪಟ್ಟವರು. ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

ಖಾಸಗಿ ಕಂಪನಿಯೊಂದಕ್ಕೆ ಸೇರಿದ ಮಿನಿ ಬಸ್ ಡಿಕ್ಕಿ ಹೊಡೆದು, ಮಂಜುನಾಥ್ ಮೃತಪಟ್ಟಿದ್ದು, ಬಸವನಕೊಪ್ಪ ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಬಸ್ ಗೆ ಕಲ್ಲು ತೂರಿದ್ದಾರೆ.

ಮೃತನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...