alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಧಾರವಾಡ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲ್ಲೂಕಿನ ನಿಗದಿ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಧಾರವಾಡದ ಗಂಟಿಕೇರಿ ಪ್ರದೇಶದ ನಿವಾಸಿಗಳೆಂದು ಗುರುತಿಸಲಾಗಿದೆ. ಕಾರಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಗೆ ಪ್ರವಾಸಕ್ಕೆ ಹೊರಟಿದ್ದ ಸಂದರ್ಭದಲ್ಲಿ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಳ್ನಾವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...