alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಬಳಿ ನಡೆದ ಭೀಕರ ಅಪಘಾತದಲ್ಲಿ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಮೃತನನ್ನು 38 ವರ್ಷದ ಗುರುಪಾದಪ್ಪ ಎಂದು ಗುರುತಿಸಲಾಗಿದೆ. ಹಿಂಬದಿ ಕುಳಿತಿದ್ದ ಮಹಿಳೆ ಕೂಡ ಸಾವನ್ನಪ್ಪಿದ್ದು, ಅವರ ಗುರುತು ಪತ್ತೆಯಾಗಿಲ್ಲ.

ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ. ಮೃತರು ಬೆಳಗಾವಿ ಜಿಲ್ಲೆ ರಾಮದುರ್ಗದವರಾಗಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...