alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ವಿನಯ್ ಕುಲಕರ್ಣಿ ವಿರುದ್ಧ ದೂರು

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಅವರ ವಿರುದ್ಧ ದೂರು ನೀಡಲಾಗಿದೆ.

ಯೋಗೀಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಅವರು ವಕೀಲರೊಂದಿಗೆ ಎಸ್.ಪಿ. ಕಚೇರಿಗೆ ಆಗಮಿಸಿ, ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾರೆ.

ಸಚಿವ ವಿನಯ್ ಕುಲಕರ್ಣಿ, ಡಿ.ವೈ.ಎಸ್.ಪಿ., ಬೆಳಗಾವಿ ಐ.ಜಿ. ಕಚೇರಿ ಡಿ.ವೈ.ಎಸ್.ಪಿ. ಹಾಗೂ ಉದ್ಯಮಿಯೊಬ್ಬರ ವಿರುದ್ಧ ಗುರುನಾಥ್ ಗೌಡ ದೂರು ನೀಡಿದ್ದಾರೆ.

ಸಚಿವರು ತಮ್ಮ ಅಧಿಕಾರ ಬಳಸಿಕೊಂಡು ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದಾರೆ. ಪ್ರಭಾವ ಬೀರಿ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿಸಲಾಗಿದ್ದು, ದೂರು ಸ್ವೀಕರಿಸಿದ ಎಸ್.ಪಿ. ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...