alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರು ಬಚ್ಚಿಡಲು ನೆರವಾದ ಗಸ್ತು ಪೊಲೀಸರಿಗೆ ಸಂಕಷ್ಟ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಗಸ್ತು ಪೊಲೀಸರಿಗೆ ಸಂಕಷ್ಟ ಎದುರಾಗಿದೆ. ಕಾರು ಅಪಘಾತದ ಬಳಿಕ ಕಾರನ್ನು ಬಚ್ಚಿಡಲು ಹೆದ್ದಾರಿಯಲ್ಲಿ ಗಸ್ತಿನಲ್ಲಿದ್ದ ಪೊಲೀಸರೇ ನೆರವು ನೀಡಿದ್ದರು ಎಂಬ ಅನುಮಾನ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಗಸ್ತು ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಆಯುಕ್ತರು ಮುಂದಾಗಿದ್ದಾರೆ.

ನಿನ್ನೆ ನಸುಕಿನ ಜಾವ ದರ್ಶನ್ ಕಾರು ಮೈಸೂರಿನ ಹೊರ ವಲಯದಲ್ಲಿ ಅಪಘಾತಕ್ಕೀಡಾಗಿದ್ದು, ನಟ ದರ್ಶನ್, ದೇವರಾಜ್, ಪ್ರಜ್ವಲ್ ದೇವರಾಜ್ ಸೇರಿ ನಾಲ್ವರು ಗಾಯಗೊಂಡಿದ್ದರು. ಅಪಘಾತದ ಬಳಿಕ ದರ್ಶನ್ ಕಾರು ನಾಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ದರ್ಶನ್ ಅವರ ಕಾರು ಅಪಘಾತವಾದ ಸಂದರ್ಭದಲ್ಲಿ ಸ್ಥಳಕ್ಕೆ ಧಾವಿಸಿದ್ದ ಗಸ್ತಿನಲ್ಲಿದ್ದ ಹೈವೇ ಪ್ಯಾಟ್ರೋಲ್ ಪೊಲೀಸರು ಕಾರನ್ನು ಬಚ್ಚಿಡಲು ನೆರವಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಪ್ರತ್ಯಕ್ಷದರ್ಶಿಗಳ ಮಾಹಿತಿ ಆಧರಿಸಿ ಗಸ್ತಿನಲ್ಲಿದ್ದ ಪೊಲೀಸರ ಮೇಲೆ ಕ್ರಮಕೈಗೊಳ್ಳಲು ಪೊಲೀಸ್ ಆಯುಕ್ತರು ಮುಂದಾಗಿದ್ದಾರೆ.

ಅಪಘಾತದ ನಂತರ ನಾಪತ್ತೆಯಾಗಿದ್ದ ದರ್ಶನ್ ಕಾರು ಶ್ರೀರಂಗಪಟ್ಟಣದ ಸ್ನೇಹಿತನ ತೋಟದಲ್ಲಿ ಪತ್ತೆಯಾಗಿತ್ತು. ಮುಚ್ಚಿಡಲಾಗಿದ್ದ ಕಾರನ್ನು ವಿವಿ ಪುರಂ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...