alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿಗೆ ಫೇಸ್ ಬುಕ್ ನಲ್ಲಿ ಕಿರುಕುಳ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಕಿಡಿಗೇಡಿಗಳು ಫೇಸ್ ಬುಕ್ ನಲ್ಲಿ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ವಿಜಯಲಕ್ಷ್ಮಿ ದೂರು ದಾಖಲಿಸಿದ್ದಾರೆ.

ನಕಲಿ ಫೇಸ್ ಬುಕ್ ಖಾತೆ ತೆರೆದಿರುವ ಕಿಡಿಗೇಡಿಗಳು ವಿಜಯಲಕ್ಷ್ಮಿ ಕುರಿತು ಅಶ್ಲೀಲ ಪದಗಳನ್ನು ಬಳಸಿ ವಿಜಯಲಕ್ಷ್ಮಿ ಹಾಗೂ ಅವರ ಕುಟುಂಬದ ಫೋಟೊಗಳನ್ನು ಬಳಸಿಕೊಂಡು ಕೀಳುಮಟ್ಟದ ಪದ ಬಳಕೆ ಮಾಡಿದ್ದಾರೆ. ಅಲ್ಲದೇ ವಿಜಯಲಕ್ಷ್ಮೀ ಅವರ ಫೋಟೊ ಎಡಿಟ್​ ಮಾಡಿರುವ ಆರೋಪಿ ಅವರ ಫೋಟೊಗೆ “ನನ್ನ ಹೆಂಡತಿ”ಎಂದು ಟ್ಯಾಗ್ ಮಾಡಿದ್ದಾನೆ.

ಈ ಹಿನ್ನಲೆಯಲ್ಲಿ ವಿಜಯಲಕ್ಷ್ಮಿ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಮಹಿಳೆ ವ್ಯಕ್ತಿತ್ವ ಹಾಗೂ ಘನತೆಗೆ ಕುಂದುಂಟಾಗುವ ರೀತಿಯಲ್ಲಿ ಕೃತ್ಯವೆಸಗಿರುವ ಕಿಡಿಗೇಡಿಗಳನ್ನು ಪತ್ತೆ ಮಾಡಿ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ. ದೂರಿನ ಮೇರೆಗೆ ಸೈಬರ್ ಕ್ರೈಂ ಪೊಲೀಸರು ಕಿಡಿಗೇಡಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ವಿವಿಧ ಕಲಂ ಗಳಡಿ ಕೇಸ್ ದಾಖಲು ಮಾಡಿ ತನಿಖೆ ಆರಂಭಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...