alex Certify ತಡರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ಪ್ರಾಧ್ಯಾಪಕ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ಪ್ರಾಧ್ಯಾಪಕ ಸ್ಥಳದಲ್ಲೇ ಸಾವು

ದಾವಣಗೆರೆ: ಅಪರಿಚಿತ ವಾಹನ ಡಿಕ್ಕಿಯಾಗಿ ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕಲ್ಲೇದೇವಪುರ ಬಳಿ ಅಪಘಾತ ಸಂಭವಿಸಿದೆ.

ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ವಾಸುದೇವನ್(59) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ರ ಹಾಗೂ ಇಬ್ಬರು ವಿದ್ಯಾರ್ಥಿನಿಯರೊಂದಿಗೆ ವಾಸುದೇವನ್ ತೆರಳುತ್ತಿದ್ದರು. ತಡರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ವಾಸುದೇವನ್ ಮೃತಪಟ್ಟಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...