alex Certify
ಕನ್ನಡ ದುನಿಯಾ       Mobile App
       

Kannada Duniya

ಮೂವರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆ

ದಾವಣಗೆರೆ: ಮೂವರನ್ನು ಬಲಿ ಪಡೆದು, 10 ಕ್ಕೂ ಅಧಿಕ ಮಂದಿಯನ್ನು ಗಾಯಗೊಳಿಸಿದ್ದ ಮತ್ತೊಂದು ಪುಂಡಾನೆಯನ್ನು ಸಾಕಾನೆಗಳ ನೆರವಿನಿಂದ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಆಂಧ್ರಪ್ರದೇಶದ ಕಡೆಯಿಂದ ಬಂದಿದ್ದ ಕಾಡಾನೆಗಳು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆ ಗಡಿಭಾಗಗಳಲ್ಲಿ ಪುಂಡಾಟಿಕೆ ನಡೆಸಿದ್ದವು. ಹಲವರನ್ನು ಬಲಿ ಪಡೆದು, ಅಪಾರ ಪ್ರಮಾಣದ ಬೆಳೆ ನಾಶಪಡಿಸಿದ್ದವು.

ದಾವಣಗೆರೆ ಜಿಲ್ಲೆ ಚನ್ನಗಿರಿಯ ಉಬ್ರಾಣಿ ಕಾಡಿನಲ್ಲಿ ಆನೆಗಳು ಸೇರಿಕೊಂಡು, ಸುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದವು. ಆನೆಗಳ ಸೆರೆಗೆ ಕಾರ್ಯಾಚರಣೆ ನಡೆಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ದುಬಾರೆ ಹಾಗೂ ಸಕ್ರೆಬೈಲಿನಿಂದ 7 ಸಾಕಾನೆಗಳನ್ನು ಕರೆತಂದಿದ್ದರು. ಸತತ 15 ದಿನಗಳ ಕಾಲ ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಲಸಾಗಿತ್ತು.

ಪುಂಡಾಟಿಕೆ ಆನೆಗಳು ನಿರಂತರವಾಗಿ ಸಂಚರಿಸುತ್ತಿದ್ದ ಕಾರಣ ಸೆರೆ ಕಾರ್ಯಾಚರಣೆ ವಿಳಂಬವಾಗಿತ್ತು. ಗುರುವಾರ 1 ಆನೆಯನ್ನು ಸೆರೆ ಹಿಡಿದಿದ್ದ ಸಿಬ್ಬಂದಿ, ಮತ್ತೊಂದು ಪುಂಡಾನೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...