alex Certify
ಕನ್ನಡ ದುನಿಯಾ       Mobile App
       

Kannada Duniya

ಸೆರೆಯಾಯ್ತು 2 ಜಿಲ್ಲೆಗಳಲ್ಲಿ ಪುಂಡಾಟ ನಡೆಸಿದ್ದ ಆನೆ

ದಾವಣಗೆರೆ: ಶಿವಮೊಗ್ಗ –ದಾವಣಗೆರೆ ಜಿಲ್ಲೆ ಗಡಿಭಾಗಗಳಲ್ಲಿ ಪುಂಡಾಟಿಕೆ ಮೆರೆದಿದ್ದ ಆನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.

ಚನ್ನಗಿರಿ ತಾಲ್ಲೂಕಿನ ಮಾವಿನಕಟ್ಟೆ ಅರಣ್ಯ ಪ್ರದೇಶದಲ್ಲಿ ಅರೆವಳಿಕೆ ಚುಚ್ಚುಮದ್ದು ನೀಡಿ ಆನೆಯನ್ನು ಸೆರೆಹಿಡಿಯಲಾಗಿದೆ.

3 ದಿನಗಳಿಂದ 7 ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಪುಂಡಾನೆ ಸೆರೆಗೆ ಕಾರ್ಯಾಚರಣೆ ನಡೆಸಿದ್ದರು.

ಡಾ. ವಿನಯ್ ನೇತೃತ್ವದ ಮೂವರು ವೈದ್ಯರ ತಂಡ ಪುಂಡಾನೆಗೆ ಅರೆವಳಿಕೆ ಚುಚ್ಚುಮದ್ದು ನೀಡಿದ್ದು, ಸಾಕಾನೆಗಳ ನೆರವಿನಿಂದ ಪುಂಡಾನೆಯನ್ನು ಸೆರೆ ಹಿಡಿಯಲಾಗಿದೆ.

ಈ ಆನೆ ಮೂವರನ್ನು ಬಲಿ ಪಡೆದು, 17 ಮಂದಿಯನ್ನು ಗಾಯಗೊಳಿಸಿತ್ತು. ಜಾನುವಾರುಗಳ ಮೇಲೂ ದಾಳಿ ಮಾಡಿತ್ತು. ಇದರಿಂದಾಗಿ ಸುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಉಂಟಾಗಿತ್ತು.

ಕಳೆದ 10 ದಿನಗಳಿಂದ ನಿರಂತರವಾಗಿ ಆನೆ ಸಂಚರಿಸುತ್ತಿದ್ದ ಕಾರಣ ಸೆರೆ ಹಿಡಿಯಲು ಸಾಧ್ಯವಾಗಿರಲಿಲ್ಲ. ಇಂದು ಅರೆವಳಿಕೆ ಚುಚ್ಚುಮದ್ದು ನೀಡಿ ಆನೆಯನ್ನು ಸೆರೆ ಹಿಡಿಯಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...