alex Certify
ಕನ್ನಡ ದುನಿಯಾ       Mobile App
       

Kannada Duniya

ಭಸ್ಮವಾಯ್ತು ಕೋಟ್ಯಂತರ ರೂ. ಮೌಲ್ಯದ ಔಷಧ

ದಾವಣಗೆರೆ: ಔಷಧಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿಗೆ ಬೆಂಕಿ ತಗಲಿ ಕೋಟ್ಯಂತರ ರೂ. ಮೌಲ್ಯದ ಔಷಧ ಸುಟ್ಟುಹೋದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ವಿದ್ಯಾರ್ಥಿಭವನ್ ಸರ್ಕಲ್ ನಲ್ಲಿರುವ ಚೇತನಾ ಫಾರ್ಮಾದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ. ಮಧ್ಯರಾತ್ರಿ ಬೆಂಕಿ ತಗುಲಿದ್ದು, ಕಟ್ಟಡದ ಮೊದಲ ಮತ್ತು 2 ನೇ ಮಹಡಿಗೆ ವ್ಯಾಪಿಸಿದೆ.

ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಈ ವೇಳೆಗಾಗಲೇ ಔಷಧಗಳು ಸುಟ್ಟು ಹೋಗಿದ್ದು, ಅಪಾರ ಹಾನಿ ಸಂಭವಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...