alex Certify
ಕನ್ನಡ ದುನಿಯಾ       Mobile App
       

Kannada Duniya

ಮದುವೆ ಊಟ ಸೇವಿಸಿ 200 ಮಂದಿ ಅಸ್ವಸ್ಥ

ದಾವಣಗೆರೆ: ಮದುವೆ ಮನೆಯಲ್ಲಿ ಊಟ ಮಾಡಿದ 200 ಕ್ಕೂ ಅಧಿಕ ಮಂದಿ ಅಸ್ವಸ್ಥರಾದ ಘಟನೆ ಚನ್ನಗಿರಿ ತಾಲ್ಲೂಕಿನ ಜಯಂತಿನಗರ ಗ್ರಾಮದಲ್ಲಿ ನಡೆದಿದೆ.

ಮದುವೆ ಬಳಿಕ ವರ ಮಂಜುನಾಯ್ಕ ಮನೆಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಊಟ ಮಾಡಿದ್ದ ಜನರಲ್ಲಿ ಹೊಟ್ಟೆನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ಮದುವೆ ಮನೆಯಲ್ಲಿ ಆತಂಕದ ವಾತಾವರಣ ಉಂಟಾಗಿದೆ.

ಕೂಡಲೇ 25 ಮಕ್ಕಳು, ಮಹಿಳೆಯರು ಸೇರಿದಂತೆ ಅಸ್ವಸ್ಥರಾಗಿದ್ದವರನ್ನು ಚನ್ನಗಿರಿ, ಶಿವಮೊಗ್ಗ, ದಾವಣಗೆರೆಯ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಚನ್ನಗಿರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಜರುಗಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...