alex Certify
ಕನ್ನಡ ದುನಿಯಾ       Mobile App
       

Kannada Duniya

ದಾವಣಗೆರೆ ದುಗ್ಗಮ್ಮನ ಜಾತ್ರೆಗೆ ಪ್ರಧಾನಿ ಮೋದಿ

ದಾವಣಗೆರೆ: ದಾವಣಗೆರೆ ನಗರ ದೇವತೆ ದುಗ್ಗಮ್ಮನ ಜಾತ್ರೆಗೆ ಲಕ್ಷಾಂತರ ಮಂದಿ ಸೇರುತ್ತಾರೆ. ಈ ಬಾರಿಯ ಜಾತ್ರೆಯ ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರೂ ದಾವಣಗೆರೆಗೆ ಆಗಮಿಸುತ್ತಿದ್ದಾರೆ.

ಜಾತ್ರೆಯ ದಿನವಾದ ಫೆಬ್ರವರಿ 27 ರಂದು ದಾವಣಗೆರೆಯಲ್ಲಿ ಬಿ.ಜೆ.ಪಿ. ರೈತ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ರಾಜಕೀಯ ರ್ಯಾಲಿಗಳಿಗೆ ಹೆಸರಾದ ದಾವಣಗೆರೆಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿರುವುದು 3 ನೇ ಬಾರಿಯಾಗಿದೆ.

2014 ರ ಲೋಕಸಭೆ ಚುನಾವಣೆಯಲ್ಲಿ ಅವರು ದಾವಣಗೆರೆಯಲ್ಲಿ ಪ್ರಚಾರ ನಡೆಸಿದ್ದರು. ಕೇಂದ್ರ ಸರ್ಕಾರ ಮೊದಲ ವರ್ಷ ಪೂರೈಸಿದಾಗ ನಡೆದ ಸಮಾವೇಶದಲ್ಲಿ ಅವರು ಪಾಲ್ಲೊಂಡಿದ್ದರು.

ಫೆಬ್ರವರಿ 27 ರಂದು ದಾವಣಗೆರೆಯಲ್ಲಿ ದುಗ್ಗಮ್ಮನ ಜಾತ್ರೆ, ಬಿ.ಜೆ.ಪಿ. ರೈತ ಸಮಾವೇಶ, ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬ ನಡೆಯಲಿದೆ. ಈ ಸಮಾರಂಭದಲ್ಲಿ ಮೋದಿ ಭಾಗವಹಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...