alex Certify
ಕನ್ನಡ ದುನಿಯಾ       Mobile App
       

Kannada Duniya

15 ದಿನಗಳಿಂದ ಪತ್ತೆಯಾಗಿಲ್ಲ ವಿದ್ಯಾರ್ಥಿ, ಪೋಷಕರ ಆಕ್ರೋಶ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಶಾಂತಿಸಾಗರ (ಸೂಳೆಕೆರೆ) ಸಮೀಪದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ನಾಪತ್ತೆಯಾಗಿದ್ದಾನೆ.

ಎಸ್.ಎಸ್.ಎಲ್.ಸಿ. ಓದುತ್ತಿದ್ದ ಶರತ್ 15 ದಿನಗಳಿಂದ ನಾಪತ್ತೆಯಾಗಿದ್ದು, ಪೋಷಕರು ಶಾಲೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಮಗ 15 ದಿನಗಳಿಂದ ಕಾಣೆಯಾಗಿದ್ದು, ಇದುವರೆಗೂ ಆತನ ಸುಳಿವು ಪತ್ತೆಯಾಗಿಲ್ಲ. ಶಾಲೆಯ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ದೂರಿದ್ದಾರೆ.

ಶರತ್ ಗಾಗಿ 15 ದಿನಗಳಿಂದ ಪೋಷಕರು ಹುಡುಕಾಟ ನಡೆಸಿದ್ದಾರೆ. ಬಸವಾಪಟ್ಟಣ ಠಾಣೆಗೂ ದೂರು ನೀಡಿದ್ದಾರೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ.

ಭದ್ರಾ ನಾಲೆಗೆ ಈಜಲು ತೆರಳಿದ್ದ ಸಂದರ್ಭದಲ್ಲಿ ಶರತ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರಬಹುದೆಂದು ಹೇಳಲಾಗಿದೆ. ಆದರೆ, ಹುಡುಕಾಟ ನಡೆಸಿದಾಗ, ಮೃತದೇಹ ಕೂಡ ಪತ್ತೆಯಾಗಿಲ್ಲ. ಇದರಿಂದಾಗಿ ಕಂಗಾಲಾದ ಕುಟುಂಬದವರು ಶಾಲೆ ಎದುರು ಹೋರಾಟ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...