alex Certify
ಕನ್ನಡ ದುನಿಯಾ       Mobile App
       

Kannada Duniya

ವಸತಿ ಶಾಲೆ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ದಾವಣಗೆರೆ: ವಸತಿ ಶಾಲೆಯೊಂದರ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಕಂಡಿದ್ದು, ತನಿಖೆ ನಡೆಸುವಂತೆ ಪೋಷಕರು ಬಸವಾಪಟ್ಟಣ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ಕಾರಿಗನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟವರು. ಸೆಪ್ಟಂಬರ್ 12 ರಂದು ಆಕೆಗೆ ಹುಷಾರಿಲ್ಲವೆಂದು ಪೋಷಕರಿಗೆ ಕರೆ ಮಾಡಲಾಗಿದೆ.

ಸೆಪ್ಟಂಬರ್ 13 ರಂದು ಪೋಷಕರು ಆಗಮಿಸಿ, ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿದ್ದು, ಭಾನುವಾರ ಚಿಕಿತ್ಸೆ ಫಲಕಾರಿಯಾಗದೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಬಾಲಕಿ ಮೃತಪಟ್ಟಿದ್ದಾಳೆ.

ನಾವು ಶಾಲೆಗೆ ಹೋದ ಸಂದರ್ಭದಲ್ಲಿ ಪುತ್ರಿಯ ಕಾಲು ಊದಿಕೊಂಡಿದ್ದು, ಆಕೆಯ ಸಾವಿನ ಕುರಿತು ಅನುಮಾನವಿದೆ ಎಂದು ಪೋಷಕರು ಹೇಳಿದ್ದು, ತನಿಖೆ ನಡೆಸಲು ಪೊಲೀಸರಿಗೆ ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...