alex Certify
ಕನ್ನಡ ದುನಿಯಾ       Mobile App
       

Kannada Duniya

ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ಶಾಸಕರಿಂದ ಲಾಬಿ

ಬೆಂಗಳೂರು : ರಾಜ್ಯದ ಜನತೆ ಈ ಬಾರಿ ಯಾರಿಗೂ ಸ್ಪಷ್ಟ ಬಹುಮತ ನೀಡಿಲ್ಲ. ಆದರೂ ಹೆಚ್ಚು ಶಾಸಕರನ್ನ ಗೆದ್ದು ತಂದ ಬಿಜೆಪಿಗೆ ರಾಜ್ಯಪಾಲರು ಸರ್ಕಾರ ರಚನೆಗೆ ಕರೆ ನೀಡಿದ್ದರು. ಬಿ.ಎಸ್.ವೈ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ನಂತರ ಮೂರೇ ದಿನಕ್ಕೆ ಬಹುಮತವನ್ನೂ ಯಾಚಿಸದೆ ರಾಜೀನಾಮೆ ನೀಡಿದ ಹೈಡ್ರಾಮಾ ಎಲ್ಲ ಮುಗಿದು, ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸುಭದ್ರ ಸರಕಾರ ರಚನೆಯಾಗಲಿದೆ ಎಂಬ ಭರವಸೆಯಲ್ಲಿ ಇರುವ ಈ ಸಂದರ್ಭದಲ್ಲಿ ಒಂದೊಂದಾಗಿ ರಾಜಕೀಯ ಮೇಲಾಟಗಳು ಶುರುವಾಗುತ್ತಿವೆ.

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ಮೈತ್ರಿ ಸರ್ಕಾರದಲ್ಲಿ ದಕ್ಷಿಣ ಭಾಗದವರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡಲಾಗಿದ್ದು, ರಾಜ್ಯದ ಉತ್ತರ ಭಾಗಕ್ಕೂ ನ್ಯಾಯ ಒದಗಿಸಿ ಡಿಸಿಎಂ ಹುದ್ದೆ ನೀಡಬೇಕೆಂಬ ಕೂಗು ಈಗ ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರಿಂದ ಶುರುವಾಗಿದೆ.

ಬೆಂಗಳೂರಿನಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಎಂ.ಬಿ. ಪಾಟೀಲ್, ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ, ಉಪ ಮುಖ್ಯಮಂತ್ರಿಯಾಗುವ ಆಸೆಯೂ ಇದೆ. ನನ್ನ ಸಮುದಾಯದ ಎಲ್ಲ ಶಾಸಕರ ಜೊತೆ ಈ ಬಗ್ಗೆ ಚರ್ಚಿಸಿದ್ದೇನೆ. ಜೊತೆಗೆ ಕಾಂಗ್ರೆಸ್ ಹೈಕಮಾಂಡ್ ಗೂ ನನ್ನ ಮನವಿಯನ್ನು ಸಲ್ಲಿಸಿದ್ದು, ನಿಯೋಜಿತ ಮುಖ್ಯಮಂತ್ರಿಗಳ ಜೊತೆಯೂ ಈ ಬಗ್ಗೆ ಮಾತನಾಡಿದ್ದೇನೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...